ಮಂಗಳವಾರ, ಜುಲೈ 11, 2023
ರಾಜ್ಯಪಾಲರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಜು.11(ಕರ್ನಾಟಕ ವಾರ್ತೆ):
ರಾಜ್ಯದ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಜುಲೈ 13 ರಂದು ಬಳ್ಳಾರಿಯಲ್ಲಿ ವಿವಿಧ ಕಾರ್ಯಕ್ರಮ ಅಂಗವಾಗಿ ಪ್ರವಾಸ ಕೈಗೊಳ್ಳುವರು.
ಜುಲೈ 12 ರಂದು ರಾತ್ರಿ ಬಳ್ಳಾರಿಗೆ ಆಗಮಿಸಿ ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಮಾಡುವರು. ಜುಲೈ 13 ರಂದು ಬೆಳಗ್ಗೆ 10 ಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿನ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ಡ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸೇರಿದಂತೆ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ನಂತರ ಬೆಳಗ್ಗೆ 11 ಕ್ಕೆ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯುವ 11 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 02 ಕ್ಕೆ ಗಡಿಭಾಗ ಚೆಳ್ಳಗುರ್ಕಿ ಗ್ರಾಮಕ್ಕೆ ಭೇಟಿ ನೀಡುವರು. ನಂತರ ಆಂಧ್ರಪ್ರದೇಶದ ಪೆನುಕೊಂಡಕ್ಕೆ ತೆರಳಿ, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ