ಭಾನುವಾರ, ಜುಲೈ 2, 2023
ಬಳ್ಳಾರಿಯಲ್ಲಿ ವಚನ ಸಾಹಿತ್ಯ ಪಿತಾಮಹ ಡಾ.ಫ.ಗು.ಹಳಕಟ್ಟಿ ಜಯಂತಿ ಆಚರಣೆ
ಬಳ್ಳಾರಿ,ಜು.02(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರದಂದು ವಚನ ಸಾಹಿತ್ಯದ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಚರಿಸಲಾಯಿತು.
ಗಣ್ಯರಿಂದ ವಚನ ಸಾಹಿತ್ಯದ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ, ವಚನ ಸಾಹಿತ್ಯದಲ್ಲಿ ವಿಶ್ವಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ನಿಷ್ಠಿ ರುದ್ರಪ್ಪ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಮತ್ತು ಡಾ.ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿ ಪುರಸ್ಕøತೆ ಎಂ.ಡಿ.ವೆಂಕಮ್ಮ, ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಟಿ.ಹೆಚ್.ಎಂ.ಬಸವರಾಜ್, ಕನ್ನಡ ಉಪನ್ಯಾಸಕ ಶಿವಾನಂದ ಹೊಂಬಳ್ಕರ್, ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ, ಖ್ಯಾತ ಹಿಂದೂಸ್ತಾನಿ ಗಾಯಕರಾದ ವಿ.ಎಂ.ವೀರಭದ್ರಯ್ಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶ್‍ಬಾಬು ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಹಾಜರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ