ಬುಧವಾರ, ಜುಲೈ 5, 2023

ವಿಕಲಚೇತನರ ಸಬಲೀಕರಣ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ ಬಳ್ಳಾರಿ,ಜು.05(ಕರ್ನಾಟಕ ವಾರ್ತೆ): 2023-24 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು www.awards.gov.in ಮತ್ತು www.disabilityaffairs.gov.in ವೆಬ್-ಸೈಟ್‍ಗೆ ಭೇಟಿ ನೀಡಬೇಕು. ಆನ್‍ಲೈನ್‍ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಸ್ವೀಕೃತಿ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 28 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ