ಗುರುವಾರ, ಜುಲೈ 27, 2023

ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.27(ಕರ್ನಾಟಕ ವಾರ್ತೆ): ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 2023-24ನೇ ಶೈಕ್ಷಣಿಕ ವರ್ಷದ 1ನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯ ವರೆಗೆÀ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರÀ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಇವರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 31 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಎಸ್ ಲೋಲಾಕ್ಷ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ