ಶುಕ್ರವಾರ, ಜುಲೈ 14, 2023

ಕುರೆಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ: ಉಲ್ಲಂಘಿಸಿದಲ್ಲಿ ಕ್ರಮ* ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‍ನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ದಂಡ ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಜುಲೈ 01 ರಿಂದ 28 ರವರೆಗೆ ‘ಪ್ಲಾಸ್ಟಿಕ್ ಮುಕ್ತ ಅಭಿಯಾನ’ ಕೈಗೊಂಡಿದ್ದು, ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಏಕ ಬಳಕೆ ಪ್ಲಾಸ್ಟಿಕ್ ಬಳಸುವ ಅಂಗಡಿಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ಪ್ಲಾಸ್ಟಿಕ್‍ನ್ನು ವಶಪಡಿಸಿಕೊಂಡು, ದಂಡ ವಸೂಲಾತಿಯನ್ನು ನಿಯಮಿತವಾಗಿ ವಿಧಿಸಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್‍ನ್ನು ಬಳಸುವುದು ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳು-2016 ಹಾಗೂ ಪೌರಸಭೆಗಳ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳು 2019ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಏಕ ಬಳಕೆ ಪ್ಲಾಸ್ಟಿಕ್‍ನಿಂದ ವಿವಿಧ ರೀತಿಯ ಗಾಳಿ, ನೀರು ಹಾಗೂ ಮಣ್ಣಿನ ಮಾಲಿನ್ಯವಾಗುತ್ತಿದ್ದು, ಪರಿಸರದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದೆ. ಆದ್ದರಿಂದ ಪಟ್ಟಣದ ಅಂಗಡಿ ಮಾಲೀಕರು, ವ್ಯಾಪಾರಸ್ತರು, ಸಾರ್ವಜನಿಕ ಸಂಸ್ಥೆಗಳು, ಸ್ವ-ಸಹಾಯ ಗುಂಪುಗಳು ಎನ್.ಜಿ.ಓಗಳು ಹಾಗೂ ಸಾರ್ವಜನಿಕರು ಪುರಸಭೆಯೊಂದಿಗೆ “ಪ್ಲಾಸ್ಟಿಕ್ ಮುಕ್ತ ಅಭಿಯಾನ”ದಲ್ಲಿ ಪಾಲ್ಗೊಳ್ಳಲು ಮತ್ತು ಕೈಜೋಡಿಸಲು ಪುರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ