ಮಂಗಳವಾರ, ಜುಲೈ 11, 2023
ಕಂಪ್ಲಿ : ಇಂಟರ್ನ್‍ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜು.11(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಮಾನವ ಸಂಪನ್ಮಲ ಅಭಿವೃದ್ಧಿ ಮಂತ್ರಾಲಯವು ಅಖಿಲ ಭಾರತ ತಾಂತ್ರಿಕ ಮಂಡಳಿಯೊಂದಿಗೆ ಇಂಟರ್ನ್‍ಶಿಪ್ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲು ಕಂಪ್ಲಿ ಪುರಸಭೆಯಲ್ಲಿ TULIP- The Urban Learning Internship Programme ಕಲಿಕಾ ಆಧಾರಿತವಾಗಿದ್ದು, ಇಂಟರ್ನ್‍ಶಿಪ್ ತರಬೇತಿ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿನ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರ ಫಲಾನುಭವಿಗಳು ಅವಶ್ಯಕತೆಯಿದ್ದು, ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ https://internship.aicte-india.org ನಲ್ಲಿ INTERNSHIPGOV_167152346363a16c876c705 ಐಡಿಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿ ಅಥವಾ ದೂ.08394-250221 ಮತ್ತು ವೆಬ್‍ಸೈಟ್ www.kamplitown.mrc.gov.in ಭೇಟಿ ನೀಡಬಹುದು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ