ಶುಕ್ರವಾರ, ಜುಲೈ 21, 2023
ಜು.24ರಂದು ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು ಕಾರ್ಯಾಗಾರ
ಬಳ್ಳಾರಿ,ಜು.21(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ, ಮಂಡಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು ಕಾರ್ಯಕ್ರಮ ಜುಲೈ 24 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಕಾರ್ಯಾಗಾರ ಉದ್ಘಾಟಿಸುವರು.
ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್.ಎನ್ ಅವರು ಅಧ್ಯಕ್ಷತೆ ವಹಿಸುವರು.
ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ.ಆರ್, ಬಳ್ಳಾರಿ ಉಪವಿಭಾಗ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ, ಬಳ್ಳಾರಿ ಪ್ರಾದೇಶಕ ಭವಿಷ್ಯ ನಿಧಿ ಆಯುಕ್ತರಾದ ವೆಂಕಟಸುಬ್ಬಯ್ಯ, ಇಎಸ್‍ಐ ಕಾರ್ಪೋರೇಷನ್ ಶಾಖಾ ವ್ಯವಸ್ಥಾಪಕರಾದ ಮನ್ನೆ ರಾಜ ಕುಮಾರ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ