ಬುಧವಾರ, ಜುಲೈ 5, 2023

ಸಂಚಾರಿ ಇ-ಚಲನ್ ದಂಡಕ್ಕೆ ಶೇ.50 ರಷ್ಟು ರಿಯಾಯಿತಿ* ಬಳ್ಳಾರಿ,ಜು.05(ಕರ್ನಾಟಕ ವಾರ್ತೆ): ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರ ರಿಯಾಯಿತಿ ನೀಡಿ ಆದೇಶಿಸಲಾಗಿದೆ. ಸಂಚಾರಿ ಪೆÇಲೀಸ್ ಇಲಾಖೆಯ ಇ-ಚಲನ್‍ನಲ್ಲಿ ಫೆಬ್ರವರಿ 11, 2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ