ಮಂಗಳವಾರ, ಜುಲೈ 18, 2023
ಬಳ್ಳಾರಿ: ಕುರಿ, ಮೇಕೆ ಘಟಕಕ್ಕಾಗಿ ಅರ್ಜಿ ಆಹ್ವಾನ*
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ):
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ ಜಿಲ್ಲೆಯಲ್ಲಿ 2023-24 ನೇ ಸಾಲಿಗೆ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ/ಮೇಕೆ (6+1) ಘಟಕ ಅನುಷ್ಠಾನಗೊಳಿಸಲು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಘದ ಸದಸ್ಯರು ಇಲ್ಲದಿರುವ ತಾಲೂಕುಗಳಲ್ಲಿ ಕುರಿ ಸಾಕಾಣಿಕೆದಾರರನ್ನು ಫಲಾನುಭವಿಗಳನ್ನಾಗಿ ಪರಿಗಣಿಸಲಾಗುವುದು.
ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅಥವಾ ಈ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಜುಲೈ 28 ರೊಳಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
*ಬೇಕಾದ ದಾಖಲೆಗಳು:* ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್ ಖಾತೆ ನಕಲು ಪ್ರತಿ, ಆಧಾರ್‍ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್‍ಕಾರ್ಡ್ ನಕಲು ಪ್ರತಿ, ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ತಾಲೂಕು/ಹೋಬಳಿಯ ಕುರಿಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು. ಅವಶ್ಯವಿರುವ ಯೋಜನೆಗಳಿಗೆ ಮೊದಲೇ ಬ್ಯಾಂಕ್‍ನಿಂದ ಸಾಲ ಮಂಜೂರಾತಿ ಸಲ್ಲಿಸಬೇಕಾಗುತ್ತದೆ ಎಂದು ಬಳ್ಳಾರಿ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ