ಗುರುವಾರ, ಜುಲೈ 20, 2023
ತಾಯಿ, ಮಗ ಕಾಣೆ: ಪ್ರಕರಣ ದಾಖಲು
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ನಗರದ ರಾಘವೇಂದ್ರ ಕಾಲೋನಿಯ ನಿವಾಸಿಯಾದ ಮಂಜುಳ ಎನ್ನುವ 38 ವರ್ಷದ ಮಹಿಳೆ ಹಾಗೂ ತನ್ನ ಮಗ ದರ್ಶನ್ ಎನ್ನುವ 14 ವರ್ಷದ ಬಾಲಕ ಜು.04 ರಂದು ಕಾಣೆಯಾಗಿರುವ ಕುರಿತು ಮಹಿಳಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.
ಮಂಜುಳ ಚಹರೆ ಗುರುತು: ಎತ್ತರ 5 ಅಡಿ, ತೆಳ್ಳನೆಯ ಮೈಕಟ್ಟು, ಸಾದಾ ಕಪ್ಪು ಮೈಬಣ್ಣ, ಉದ್ದನೇಯ ಮುಖ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ತೆಲುಗು ಭಾಷೆ ಮಾತನಾಡುತ್ತಾಳೆ.
ಮಗ ದರ್ಶನ್ ಚಹರೆ ಗುರುತು: ಎತ್ತರ 5.3 ಅಡಿ, ತೆಳ್ಳನೆಯ ಮೈಕಟ್ಟು, ಗೋಧಿ ಮೈಬಣ್ಣ, ಉದ್ದ ಮುಖ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಂದು ಬಣ್ಣದ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗನ ಬಗ್ಗೆ ಸುಳಿವು ಸಿಕ್ಕಲ್ಲಿ ಮಹಿಳಾ ಪೆÇಲೀಸ್ ಠಾಣೆಯ ದೂ.08392-274100, 08392-272322, 08392-258400 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ