ಸೋಮವಾರ, ಜುಲೈ 10, 2023
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ; ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭ ಜು.13 ರಂದು
ಬಳ್ಳಾರಿ,ಜು.10(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ಡ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸೇರಿದಂತೆ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭವು ಜುಲೈ 13 ರಂದು ಬೆಳಗ್ಗೆ 10 ಕ್ಕೆ ವಿಶ್ವ ವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ಉದ್ಘಾಟಿಸುವರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ಲೋಕಸಭಾ ಸದಸ್ಯರಾದ ದೇವೆಂದ್ರಪ್ಪ ಅವರು ಘನ ಉಪಸ್ಥಿತಿ ಇರುವರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ.ಸಿದ್ದು ಪಿ.ಅಲಗೂರು ಅವರು ಅಧ್ಯಕ್ಷತೆ ವಹಿಸುವರು.
ಕುಲಸಚಿವರಾದ ಪೆÇ್ರ.ಎಸ್.ಸಿ.ಪಾಟೀಲ್, ಕುಲಸಚಿವರಾದ(ಮೌಲ್ಯಮಾಪನ) ಪ್ರೋ.ರಮೇಶ್ ಓ.ಓಲೇಕಾರ್, ವಿತ್ತಾಧಿಕಾರಿಗಳಾದ ಖಾಜಾ ಮೈನುದ್ದೀನ್.ಎಂ.ಡಿ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತÀರಿರುವರು ಎಂದು ವಿವಿ ಪ್ರಕಟಣೆ ತಿಳಿಸಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ