ಶುಕ್ರವಾರ, ಜುಲೈ 14, 2023

ಕೆಂಪು ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ವಿಮೆಗೆ ನೋಂದಾಯಿಸಿಕೊಳ್ಳಿ ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ಸಿರುಗುಪ್ಪ ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಕೆಂಪು ಮೆಣಸಿನಕಾಯಿ (ನೀರಾವರಿ): ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆ ಬೆಳೆದಿರುವ ರೈತರು ವಿಮಾ ಮೊತ್ತ ಪ್ರತಿ ಹೆಕ್ಟೇರ್‍ಗೆ (ರೂ.ಗಳಲ್ಲಿ) 1,07,500 ಆಗಿದ್ದು, ಪ್ರತಿ ಹೆಕ್ಟೇರ್‍ಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ (ರೂ.ಗಳಲ್ಲಿ) 5,375 ಆಗಿರುತ್ತದೆ. ವಿಮಾ ಮೊತ್ತ ಪಾವತಿಸಲು ಜುಲೈ 31ರಂದು ಕೊನೆಯ ದಿನವಾಗಿರುತ್ತದೆ ಬೆಳೆ ವಿಮೆ ಮಾಡಿಸಿಕೊಳ್ಳಲು ಬೇಕಾಗುವ ದಾಖಲೆಗಳು: ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಕಂದಾಯ ರಸೀದಿ, ಖಾತೆ ಪುಸ್ತಕ, ಬ್ಯಾಂಕ್ ಖಾತೆಯ ಪುಸ್ತಕ, ಆಧಾರ್‍ಕಾರ್ಡ್ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಕಾಮನ್ ಸರ್ವಿಸ್ ಸೆಂಟರ್) ಹಾಗೂ ಗ್ರಾಮಓನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ