ಶುಕ್ರವಾರ, ಜುಲೈ 28, 2023

ಸೈನಿಕ ಕಲ್ಯಾಣ ಇಲಾಖೆಯಿಂದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.28(ಕರ್ನಾಟಕ ವಾರ್ತೆ): 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸೈನಿಕ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ಪಿಯುಸಿ 2ನೇ ವರ್ಷದವರೆಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಪದವಿ, ಡಿಪೆÇ್ಲೀಮಾ ಜೆಓಸಿ, ಪೆÇ್ರೀಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಮಿಲಿಟರಿ ಪಿಂಚಣಿ ರಹಿತ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಇವರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 30, 2023 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಕಾರ್ಯಾಲಯದಲ್ಲಿ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕ ಎಂ.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ