ಶುಕ್ರವಾರ, ಜುಲೈ 14, 2023

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ವಿಸ್ತರಣೆ ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 20 ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ವೆಬ್ ಸೈಟ್ http://dom.karnataka.gov.in ಗೆ ಹಾಗೂ ಕಚೇರಿ ದೂ.08392-200125,224, ಸಹಾಯವಾಣಿ ಸಂಖ್ಯೆ ಮೊ.8277799990, ಮೊ.8746818180 ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಅಲ್ಪಸಂಖ್ಯಾತರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ