ಗುರುವಾರ, ಜುಲೈ 20, 2023
ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24 ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲ್ಯೂ., ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪೆÇ್ಲೀಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಆನ್‍ಲೈನ್ ಆಡ್ಮಿಷನ್ ಪೆÇೀರ್ಟಲ್‍ನಲ್ಲಿ ಪ್ರವೇಶಾತಿ ಮಾಡಿಕೊಳ್ಳಬಹುದು.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್‍ಸರ್ವೀಸ್‍ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೈವರ್ ಮತ್ತು ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ. ಕೋವಿಡ್‍ನಿಂದಾಗಿ ಮೃತರಾದ ಪೆÇೀಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.
ಆಗಸ್ಟ್ 31 ರಂದು ಪ್ರವೇಶಾತಿ ಮಾಡಿಸಲು ಕೊನೆ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್‍ಲೈನ್ ಸಹಾಯವಾಣಿ 8800335638 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ ಕರಾಮುವಿ ಪ್ರಾದೇಶಿಕ ಕೇಂದ್ರ ಅಥವಾ ಮೊ.8970223247 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಯ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಗೋಪಾಲ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ