ಶುಕ್ರವಾರ, ಜುಲೈ 28, 2023

ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ.ಜು.28(ಕರ್ನಾಟಕ ವಾರ್ತೆ): 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಿಗೆ (ಪಿ.ಯು.ಸಿ ನಂತರದ ಕೋರ್ಸುಗಳಲ್ಲಿ ಪ್ರವೇಶಾತಿ ಹೊಂದಿದ) ಅರ್ಹ ವಿದ್ಯಾರ್ಥಿಗಳಿಂದ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಲಿಂಕ್ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 16 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂ. 08392-200125/224 ಮತ್ತು ಬಳ್ಳಾರಿ ವಿಭಾಗ ವಿಸ್ತರಣಾಧಿಕಾರಿ ಮೊ.8746818180 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ