ಗುರುವಾರ, ಜುಲೈ 6, 2023
ರಾಷ್ಟ್ರೀಯ ಲೋಕ ಅದಾಲತ್ ಜು.08 ರಂದು
ಬಳ್ಳಾರಿ,ಜು.06(ಕರ್ನಾಟಕ ವಾರ್ತೆ):
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜುಲೈ 08 ರಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು , ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ/ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಜುಲೈ 08 ರಂದು ಮೇಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.
*ವಿಶೇಷ ಸೂಚನೆ:* ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ನಡೆಯುತ್ತಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಅಥವಾ ದೂ.08392-278077 ಹಾಗೂ ಇ-ಮೇಲ್ ವಿಳಾಸ ballari.dsla@gmail.com ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ