ಶುಕ್ರವಾರ, ಜುಲೈ 7, 2023
ಕನ್ನಡ ಸಾಹಿತ್ಯ ಪರಿಷತ್ತು: ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.07(ಕರ್ನಾಟಕ ವಾರ್ತೆ):
ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ, ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜ ಅವರು ತಿಳಿಸಿದ್ದಾರೆ.
2023 ನೇ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆ.31 ಕೊನೆಯ ದಿನಾಂಕವಾಗಿದ್ದು, ಸೆ.15 ರವರೆಗೆ ದಂಡ ಶುಲ್ಕ ರೂ.50ನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25 ಶುಲ್ಕ ಪಾವತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ(ಬೆಂಗಳೂರು)ಯಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ರೂ.30 ಗಳನ್ನು ಮನಿಆರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಪಡೆದುಕೊಳ್ಳಬಹುದಾಗಿದೆ ಹಾಗೂ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳ ಕಚೇರಿ ಅಥವಾ ದೂ.080-26623584, 26612991, 22423867 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ