ಗುರುವಾರ, ಜುಲೈ 6, 2023
ಅರ್ಜಿ ಅವಧಿ ವಿಸ್ತರಣೆ
ಬಳ್ಳಾರಿ,ಜು.06(ಕರ್ನಾಟಕ ವಾರ್ತೆ):
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು 2022-23ನೇ ಸಾಲಿಗೆ ಬಿಸಿಎಂ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮಕ್ಕೆ ಮಾತ್ರ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ದೂ.080-35254757ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಆರ್.ಸುರೇಶ್‍ಬಾಬು ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ