ಗುರುವಾರ, ಜುಲೈ 13, 2023
ಬಿಡಿಎಎ ಫುಟ್‍ಬಾಲ್ ಮೈದಾನ, ಕ್ರೀಡಾ ವಸತಿ ನಿಲಯಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ ಪರಿಶೀಲನೆ*
ಬಳ್ಳಾರಿ,ಜು.13(ಕರ್ನಾಟಕ ವಾರ್ತೆ):
ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಕ್ರೀಡಾಂಗಣ ಹಾಗೂ ಕ್ರೀಡಾ ವಸತಿನಿಲಯಕ್ಕೆ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಗುರುವಾರದಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ರೀಡಾ ವಸತಿನಿಲಯದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಸಚಿವರು, ಊಟೋಪಹಾರ ಸೇರಿದಂತೆ ಇಲಾಖೆಯಿಂದ ದೊರೆಯುತ್ತಿರುವ ಸೌಲಭ್ಯ ಹಾಗೂ ತರಬೇತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಕೋಚ್‍ಗಳು ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವಂತೆ ಸೂಚಿಸಿದರು.
ನಂತರ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರೊಂದಿಗೆ ತೆರಳಿ ಪುಟ್ಬಾಲ್ ಮೈದಾನ ವೀಕ್ಷಣೆ ಮಾಡಿದರು. ಕಳೆದ ಹತ್ತು ವರ್ಷಗಳ ಹಿಂದೆ ಹಾಕಲಾಗಿದ್ದ ಕ್ರೀಡಾಂಗಣದ ಹುಲ್ಲಿನ ಹಾಸನ್ನು ಒಂದು ತಿಂಗಳ ಒಳಗಾಗಿ ಸಂಪೂರ್ಣವಾಗಿ ಬದಲಾಯಿಸಿ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾಂಗಣ ನಿರ್ಮಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)









ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ