ಶನಿವಾರ, ಜುಲೈ 1, 2023

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಜು.03 ರಂದು ಬಳ್ಳಾರಿ,ಜು.01(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್‍ಗಳಾದ ಎಫ್-23, ಎಫ್-24, ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಜುಲೈ 03 ರಂದು ಬೆಳಗ್ಗೆ 07 ರಿಂದ 10 ರವರೆಗೆ ನಗರದ ಬೆಂಗಳೂರು ರಸ್ತೆ, ಬಾಪೂಜಿ ನಗರ, ಮೋತಿ ವೃತ್ತ, ತೇರು ಬೀದಿ, ಸಭಾಪತಿ ಸ್ಟ್ರೀಟ್, ಬಂಡಿಮೋಟ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ