ಬುಧವಾರ, ಜುಲೈ 12, 2023
ಕುರುಗೋಡು: ಇಂಟರ್ನ್‍ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ*
ಬಳ್ಳಾರಿ,ಜು.12(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಮಾನವ ಸಂಪನ್ಮಲ ಅಭಿವೃದ್ಧಿ ಮಂತ್ರಾಲಯವು ಅಖಿಲ ಭಾರತ ತಾಂತ್ರಿಕ ಮಂಡಳಿಯೊಂದಿಗೆ ಇಂಟರ್ನ್‍ಶಿಪ್ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲು ಸೂಚಿಸಿದ್ದು, ಕುರುಗೊಡು ಪುರಸಭೆಯಲ್ಲಿ 2023-24 ನೇ ಸಾಲಿಗೆ TULIP- The Urban Learning Internship Programme ಕಲಿಕಾ ಆಧಾರಿತ ಕಾರ್ಯಕ್ರಮದಡಿ ಇಂಟರ್ನ್‍ಶಿಪ್ ತರಬೇತಿ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರುವ ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿನ ಫಲಾನುಭವಿಗಳು ಅವಶ್ಯಕತೆಯಿದ್ದು, ಸಹಾಯಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮಾತ್ರ ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ https://internship.aicte-india.org ನಲ್ಲಿ INTERNSHIPGOV_168906033764ad03f158f2a ಐಡಿಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿ ದೂ.08393-263116 ಮತ್ತು ವೆಬ್‍ಸೈಟ್ www.kurugodutown.mrc.gov.in ಗೆ ಭೇಟಿ ನೀಡಬಹುದು ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
______
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ