ಬುಧವಾರ, ಜುಲೈ 19, 2023

ರೂಪನಗುಡಿಯಲ್ಲಿ “ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ” ನಿಮಿತ್ತ ಜಾಥಾ ಬಳ್ಳಾರಿ,ಜು.19(ಕರ್ನಾಟಕ ವಾರ್ತೆ): ರಾಜ್ಯಾದಾದ್ಯಂತ ಜು.17 ರಿಂದ ಆ.02 ರವರೆಗೆ ನಡೆಯುವ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮದಡಿ ರೂಪನಗುಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದಿಂದ ಬುಧವಾರದಂದು ಜಾಥಾ ನಡೆಯಿತು. ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಿತ್ರಾ ವರ್ಣೇಕರ್ ಅವರು ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎರಡು ವಾರಕ್ಕೂ ಹೆಚ್ಚು ದಿನ ಕೆಮ್ಮು ಇರುವವರು ಹಾಗೂ ಕ್ಷಯ ರೋಗದಿದಂದ ಗುಣಮುಖರಾದವರು ಸಹ ಮತ್ತೊಮ್ಮೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಆಯುಷ್ ವೈದ್ಯಾಧಿಕಾರಿ ಡಾ.ನಾರಾಯಣಬಾಬು, ವೈದ್ಯಾಧಿಕಾರಿ ಪ್ರಜ್ವಲ್ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು. ಜಾಥಾವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ