ಮಂಗಳವಾರ, ಜುಲೈ 11, 2023
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ ಜು.28 ರವರೆಗೆ
ಬಳ್ಳಾರಿ,ಜು.11(ಕರ್ನಾಟಕ ವಾರ್ತೆ):
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕøತ ಸ್ವಚ್ಛ ಭಾರತ ಮಿಷನ್ (ನಗರ) 2.0 ಯೋಜನೆ ಐ.ಇ.ಸಿ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಉತ್ತೇಜಿಸುವ ಮೂಲಕ ಏಕ ಬಳಕೆ ಪ್ಲಾಸ್ಟಿಕ್‍ನಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಪ್ಲಾಸ್ಟಿಕ್ ತ್ಯಾಜ್ಯದಿಂದ ಸಂಭವಿಸಬಹುದಾದ ವಿವಿಧ ರೀತಿಯ ಗಾಳಿ, ನೀರು ಮತ್ತು ಮಣ್ಣಿನ ಮಾಲಿನ್ಯತೆ ಕುರಿತು ಸಾರ್ವಜನಿಕರಲ್ಲಿ ಅರಿವು ಜಾಗೃತಿ ಮೂಡಿಸುವ ಅಂಗವಾಗಿ ಜುಲೈ 28 ರವರೆಗೆ ವಿವಿಧ ರೀತಿಯ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುಸ್ಥಿರ ಮೂಲ ಸೌಕರ್ಯಗಳ ಅಭಿವೃದ್ಧಿಯನ್ನು ಉತ್ತೇಜಿಸಿ ಪೆÇ್ರೀತ್ಸಾಹಿಸಲು ಹಾಗೂ ಪರಿಸರ ಸ್ನೇಹಿ ಸಾಮಾಗ್ರಿಗಳನ್ನು ಬಳಕೆ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಸಾರ್ವಜನಿಕರಲ್ಲಿ, ವ್ಯಾಪಾರಿಗಳಲ್ಲಿ, ಶಾಲಾ ಮಕ್ಕಳಲ್ಲಿ, ನಾಗರಿಕರಲ್ಲಿ, ಪ್ರವಾಸಿಗಳಲ್ಲಿ ಹಾಗೂ ಪೌರಕಾರ್ಮಿಕರಲ್ಲಿ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
*ಕಾರ್ಯಕ್ರಮದ ವಿವರ:*
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಬಗ್ಗೆ ಸಾರ್ವಜನಿಕವಾಗಿ ಜನ ಜಾಗೃತಿಯನ್ನು ವಿವಿಧ ವೇದಿಕೆ ಮೂಲಕ ಪ್ರಚಾರ ಪಡಿಸುವುದು, ದಿನಪತ್ರಿಕೆ, ಸಾಮಾಜಿಕ ಜಾಲತಾಣ, ಇಲೆಕ್ಟ್ರಾನಿಕ್ ಮಾಧ್ಯಮ, ಧ್ವನಿವರ್ಧಕ, ಕರಪತ್ರ ಇತ್ಯಾದಿ ಮೂಲಗಳಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ. ಪೌರಕಾರ್ಮಿಕರು ಮತ್ತು ಬೀದಿ ಬದಿ ಪ್ಯಾರಿಸ್ಟರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ತರಬೇತಿ ಕಾರ್ಯಕ್ರಮ. ಜುಲೈ 28 ರವರೆಗೆ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಶಾಲೆ/ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮ.
ಜು.12 ರಂದು ಬೆಳಗ್ಗೆ 11ಕ್ಕೆ ಕುರುಗೋಡು ಪಟ್ಟಣದ ಶ್ರೀ ದೊಡ್ಡಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆÀ ಮುಕ್ತದೇಶವೆಂದು ಘೋಷಿಸುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ. ಜು.28ವರೆಗೆ ಪಟ್ಟಣದ ತೇರುಬೀದಿ, ಬಾದನಹಟ್ಟಿ ರಸ್ತೆ, ಹಳೇ ಎಸ್.ಬಿ.ಎಮ್ ರೋಡ್, ಮುಖ್ಯ ವೃತ್ತ ಹಾಗೂ ವಾಣಿಜ್ಯ ವ್ಯವಹಾರ ಸ್ಥಾಪನೆಗಳನ್ನು ಹಸಿರು ಸಂಸ್ಥೆಗಳನ್ನಾಗಿ (ಪರಿಸರ ಸ್ನೇಹಿ ಸಂಸ್ಥೆಗಳನ್ನಾಗಿ ಘೋಷಿಸಲು ಸಮನ್ವಯತೆ ಸಾಧಿಸುವುದು).
ಜು.28ವರೆಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವ ವಿವಿಧ ವಾಣಿಜ್ಯ ವ್ಯವಹಾರಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸುವುದು ಹಾಗೂ ಪ್ಲಾಸ್ಟಿಕ್ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ.
ಜು.28ವರೆಗೆ ಮನೆ ಹಾಗೂ ವಾಣಿಜ್ಯ ಕಟ್ಟಡಗಳ ಪ್ರತಿನಿತ್ಯ ತ್ಯಾಜ್ಯ ಸಂಗ್ರಹಣೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೆ ಮಾಡಲು ಆರ್.ಆರ್.ಆರ್ (ರೆಡ್ಯೂಸ್/ಕಡಿಮೆಗೊಳಿಸುವುದು, ರಿಯ್ಯೂಸ್/ಪುನರ್ ಬಳಕೆ, ರಿಸೈಕಲ್/ಮರುಬಳಕೆ) ವಿಧಾನವನ್ನು ಪ್ರತಿನಿತ್ಯ ಸಾರ್ವಜನಿಕರು ಅಳವಡಿಸಿಕೊಳ್ಳಲು ಡ್ರೈವ್ ಮೂಲಕ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ