ಸೋಮವಾರ, ಜುಲೈ 3, 2023
ಜು.04 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.03(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಶ್ರೀಧರಗಡ್ಡ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11 ಕೆ.ವಿ ಮಾರ್ಗಗಳಲ್ಲಿ ಜುಲೈ 04 ರಂದು ಬೆಳಗ್ಗೆ 09 ರಿಂದ ಸಂಜೆ 05 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು:*
ಎಫ್-1 ಫೀಡರ್‍ನ ಎನ್.ಜೆ.ವೈ ಮಾರ್ಗದ ಬಾಲಾಜಿನಗರ ಕ್ಯಾಂಪ್, ಕೊರ್ಲಗುಂದಿ ವಿಜಯನಗರ ಕ್ಯಾಂಪ್ ಜಾಲಿಬೆಂಜಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ ಗ್ರಾಮ.
ಎಫ್-2 ಫೀಡರ್‍ನ ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗ, ಸೋಮಸಮುದ್ರ ಗ್ರಾಮ, ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಮುಂತಾದ ಗ್ರಾಮಗಳು.
ಎಫ್-03 ಫೀಡರ್‍ನ ಶ್ರೀಧರಗಡ್ಡೆ ಎನ್.ಜೆ.ವೈ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಮತ್ತು ಇತರೆ ಗ್ರಾಮಗಳು.
ಎಫ್-4 ಫೀಡರ್‍ನ ಐ.ಪಿ ಸೆಟ್ ಕೊರ್ಲಗುಂದಿ ಮಾರ್ಗದ ಕೊರ್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜಾಲಿಬೆಂಜಿ, ಶ್ರೀಧರಗಡ್ಡ, ವಿಜಯನಗರ ಕ್ಯಾಂಪ್.
ಎಫ್-5 ಫೀಡರ್‍ನ ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ