ಮಂಗಳವಾರ, ಜುಲೈ 4, 2023

ಯುವಕ ನಾಪತ್ತೆ: ಪ್ರಕರಣ ದಾಖಲು ಬಳ್ಳಾರಿ,ಜು.04(ಕರ್ನಾಟಕ ವಾರ್ತೆ): ಕುಡುತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಾಲಪುರ ರೈಲ್ವೇ ಗೇಟ್ ಬಳಿ ರಾಘವೇಂದ್ರ ಎನ್ನುವ 24 ವರ್ಷದ ಯುವಕ ಜೂ.27 ರಂದು ಕಾಣೆಯಾಗಿರುವ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯುವಕನ ಚಹರೆ ಗುರುತು: ಸುಮಾರು 6 ಅಡಿ ಎತ್ತರ, ಕೋಲುಮುಖ, ಸಾಧಾರಣ ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಬಲ ಮೊಣಕಾಲಿನ ಮೇಲೆ ಅಪರೇಷನ್ ಆದ ಗುರುತು ಇದೆ. ಕಾಣೆಯಾದ ಸಂದರ್ಭದಲ್ಲಿ ಮೆರೂನ್ ಬಣ್ಣದ ಟೀ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ಮೊ.9880777698 ಹಾಗೂ ಹತ್ತಿರದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ