ಗುರುವಾರ, ಜುಲೈ 20, 2023
Top Class ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೇಂದ್ರ ಪುರಸ್ಕøತ Top Class ವಿದ್ಯಾರ್ಥಿ ವೇತನವನ್ನು ಪಡೆಯಲು ರಾಜ್ಯದ ಪ್ರತಿಷ್ಠಿತ ಶಾಲೆ ಹಾಗೂ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಕೇಂದ್ರ ಪುರಸ್ಕøತ Top Class ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದ ಮುಖಾಂತರ ಅನುಷ್ಠಾನಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೂಲಕ ಸೆಪ್ಟಂಬರ್ 29 ರಂದು ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 10 ಆಗಿರುತ್ತದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ಸೈಟ್ https://yet.nta.ac.in ವಿಳಾಸಕ್ಕೆ ಭೇಟಿ ನೀಡಬಹುದು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ
https://socialjustice.gov.in/schemes/ ಭೇಟಿ ನೀಡಬಹುದು ಅಥವಾ ಎನ್.ಎಸ್.ಪಿ. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮಾಹಿತಿಗೆ ದೂ.011-40759000, 011-69227700 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ