ಗುರುವಾರ, ಆಗಸ್ಟ್ 31, 2023
ತೆಕ್ಕಲಕೋಟೆ: ವಿದ್ಯಾರ್ಥಿ ನಿಲಯಕ್ಕೆ ಕಟ್ಟಡ ಬಾಡಿಗೆಗೆ ಬೇಕಾಗಿದೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ(ಬಿಸಿಡಬ್ಲ್ಯೂಡಿ1690) ನಡೆಸಲು, 125 ಸಂಖ್ಯಾಬಲ ವಿದ್ಯಾರ್ಥಿಗಳ ವಾಸಕ್ಕೆ ಸ್ಥಳಾವಕಾಶವಿರುವ ಮೂಲಭೂತ ಸೌಕರ್ಯ ಹೊಂದಿರುವ ಸುಸಜ್ಜಿತ ಕಟ್ಟಡ ಅವಶ್ಯಕತೆ ಇದ್ದು, ಬಾಡಿಗೆ ನೀಡಲು ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಸಾಮಥ್ರ್ಯ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದೂ.08392-220414 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-----
ಕಂಪ್ಲಿ ಪಟ್ಟಣದಲ್ಲಿ ವಿವಿಧೆಡೆ ದಾಳಿ; ಇಬ್ಬರು ಬಾಲಕಾರ್ಮಿಕರು, ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಂಪ್ಲಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯಿಂದ ಕಂಪ್ಲಿ ಪಟ್ಟಣದ ವಿವಿಧೆಡೆ ಆಕಸ್ಮಿಕ ದಾಳಿ ನಡೆಸಿ ಗುರುವಾರದಂದು, 2 ಬಾಲಕಾರ್ಮಿಕ ಮತ್ತು 2 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ಕಂಪ್ಲಿಯ ಮುಖ್ಯ ಬೀದಿಗಳಲ್ಲಿ, ಬಳ್ಳಾರಿ ರಸ್ತೆ, ಕುರುಗೋಡು ರಸ್ತೆ, ಮತ್ತು ಹೊಸಪೇಟೆ ರಸ್ತೆಯ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಹಣ್ಣಿನ ಅಂಗಡಿ ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 2 ಬಾಲಕಾರ್ಮಿಕ ಮತ್ತು 2 ಕಿಶೋರ ಕಾರ್ಮಿಕ ಮಕ್ಕಳನ್ನು ಬಿಡುಗಡೆಗೊಳಿಸಲಾಗಿದೆ.
ರಕ್ಷಣೆ ಮಾಡಿದ ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಿ ಮಕ್ಕಳ ವಯಸ್ಸಿನ ಧೃಡೀಕರಣವನ್ನು ಪಡೆದು, ಸಂಬಂದಿಸಿದ ಮಾಲೀಕರ ವಿರುದ್ದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಗುರುವಾರದಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ 06 ಪ್ರಕರಣಗಳನ್ನು ದಾಖಲಿಸಿ ರೂ.1600 ಗಳನ್ನು ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲಾಯಿತು.
ಟಾಸ್ಕ್‍ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರೆ ಗೌಸೀಯ ಬೇಗಂ, ಕಾರ್ಮಿಕ ನಿರೀಕ್ಷಕ ಅಶೋಕ್, ಕಂಪ್ಲಿ ಪುರಸಭೆಯ ಪರಿಸರ ಅಭಿಯಂತರೆ ಸ್ವಾತಿ, ತಾಲೂಕು ವೈದ್ಯಾಧಿಕಾರಿ ಅರುಣ್.ಜಿ, ತಾಪಂ ಕಂದಾಯ ನಿರೀಕ್ಷಕರಾದ ಎಂ.ಜಗದೀಶ್, ಅಪರಂಜಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಬೋಜರಾಜ್ ಹಾಜರಿದ್ದರು.
---------
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿಗೆ ಬಳ್ಳಾರಿ ಮತ್ತು ಕುರುಗೋಡು ತಾಲೂಕುಗಳಲ್ಲಿ ಕೆಎಂಇಆರ್‍ಸಿಯ ಸಿಇಪಿಎಂಐಜೆಡ್ ಯೋಜನೆಯಡಿ ವಿವಿಧ ತೋಟಗಾರಿಕೆ ಸೌಲಭ್ಯಗಳಿಗಾಗಿ ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈರುಳ್ಳಿ ಶೇಖರಣೆ ಘಟಕ ಹಾಗೂ ಫಾರಂ ಗೇಟ್ ಘಟಕಗಳು ನಿರ್ಮಾಣಕ್ಕಾಗಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮಗಾ ಮೈಕ್ರೋ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಟಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ, ಬಯೋಡೈಜೆಸ್ಟರ್, ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿಯಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಸಾಹಿತ್ಯದಿಂದಲೇ ಉತ್ತಮ ಸಮಾಜ ನಿರ್ಮಾಣ: ಪ್ರೊ.ಸಾಹೇಬ್ ಅಲಿ ಹೆಚ್.ನಿರಗುಡಿ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಸಾಹಿತ್ಯದಿಂದ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ, ಸಾಹಿತ್ಯವಿಲ್ಲದೆ ಸಮಾಜ ಉಳಿಯಲು ಸಾಧ್ಯವಿಲ್ಲ ಎಂದು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಸಾಹೇಬ್ ಅಲಿ ಹೆಚ್.ನಿರಗುಡಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದÀ ಇಂಗ್ಲೀಷ್ ಅಧ್ಯಯನ ವಿಭಾಗ ಮತ್ತು ಇಂಗ್ಲೀಷ್ ಪದವಿ ಶಿಕ್ಷಕರ ಸಂಘದ ಜಂಟಿ ಸಹಯೋಗದಲ್ಲಿ ವಿಶ್ವ ವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ‘ರಿವಿಸಿಟಿಂಗ್ ದಿ ಇಂಟರ್‍ಸೆಕ್ಷನಲ್ ಆಫ್ ಲಿಟ್ರೇಚರ್, ಕಾಸ್ಟ್ ಆ್ಯಂಡ್ ಜಂಡರ್’ ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಾಹಿತ್ಯವು ವ್ಯಕ್ತಿಗಳಷ್ಟೇ ಅಲ್ಲದೆ ಸಮಾಜದ ಮೇಲೂ ಹೆಚ್ಚು ಪ್ರಭಾವ ಬೀರುತ್ತದೆ. ನಮ್ಮ ಸಮಾಜದ ಅನಿಷ್ಟ ಪದ್ಧತಿಗಳಾದ ಜಾತೀಯತೆ, ಮೂಢನಂಬಿಕೆ, ಅನ್ಯಾಯ ಇತ್ಯಾದಿ ಅಂಶಗಳಿಂದ ಕಲುಷಿತಗೊಂಡಿದೆ. ಇಂತಹ ಅಂಶಗಳ ವಿರುದ್ಧ ಹೋರಾಡಲು ಸಾಹಿತ್ಯವು ಸಹಕಾರಿಯಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಾಹಿತ್ಯವನ್ನು ಆಳವಡಿಸುವುದು ಬಹುಮುಖ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ದಲಿತ ಸ್ತ್ರೀವಾದಿ ಲೇಖಕಿ ಪಿ. ಶಿವಕಾಮಿ ಅವರು ಮಾತನಾಡಿ, ಭಾರತೀಯ ಸಮಾಜದಲ್ಲಿ ಜಾತಿ ವ್ಯವಸ್ಥೆಯ ಮೂಲಕ ಶೋಷಣೆಗೊಳಗಾದವರನ್ನು ದೀನ-ದಲಿತ ಎಂದು ವರ್ಗಿಕರಿಸಲಾಗಿದೆ. ಜಾತಿ ಮತ್ತು ಲಿಂಗ ತಾರತಮ್ಯದಿಂದ ನಮ್ಮ ಸಮಾಜದ ಮೇಲೆ ಆಗಿರುವ ಪರಿಣಾಮಗಳ ಕುರಿತು ವಿವರಿಸಿದರು. ಉತ್ತಮ ಸಮಾಜ ನಿರ್ಮಾಣದಲ್ಲಿ ಕಾದಂಬರಿಗಳ ಪಾತ್ರವು ಮುಖ್ಯವಾದದ್ದು ಎಂದು ಆಭಿಪ್ರಾಯಪಟ್ಟರು.
ವಿಚಾರ ಸಂಕಿರಣ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಇಂಗ್ಲೀಷ್ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ಎನ್ ಶಾಂತನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ್, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ.ಸದ್ಯೋಜಾಥಪ್ಪ, ಕನ್ನಡ ಬರಹಗಾರ ಪ್ರೊ.ಕಾಳೇಗೌಡ ನಾಗವಾರ, ಡಾ.ಬಸವರಾಜು ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---------
ಗಾಯತ್ರಿಗೆ ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಧಾರವಾಡದ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಗಾಯತ್ರಿ ಚೆನ್ನವೀರಯ್ಯ ಕುಲಕರ್ಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ.
ಜೆಎಸ್‌ಎಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜೆ.ಎ ಹಡಗಲಿ ಅವರ ಮಾರ್ಗದರ್ಶನದಲ್ಲಿ ಗಾಯತ್ರಿ ಅವರು ಕನ್ನಡ ಸಾಹಿತ್ಯ ಅದ್ಯಯನ ವಿಭಾಗದಲ್ಲಿ "ಕನ್ನಡ ಚಲನಚಿತ್ರ ಗೀತೆಗಳಲ್ಲಿ ಮಹಿಳಾ ಪ್ರತಿನಿಧೀಕರಣ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.
ಪ್ರಸ್ತುತ ಧಾರವಾಡದ ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಗಾಯತ್ರಿ ಕುಲಕರ್ಣಿ ಅವರು ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮಾಗಳ ಗ್ರಾಮದವರಾಗಿದ್ದಾರೆ.
-------
ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಒತ್ತು 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ (ಫೋನ್-ಇನ್) ಕಾರ್ಯಕ್ರಮ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪಾರದರ್ಶಕ ಪರೀಕ್ಷೆ/ನಕಲು ತಡೆಯುವ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆಯು ವಿಶೇಷ ಒತ್ತು ನೀಡಿದೆ. ಇದಕ್ಕಾಗಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ (ಫೋನ್-ಇನ್) ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹನುಮಕ್ಕ ಅವರು ತಿಳಿಸಿದ್ದಾರೆ.
ವಿಷಯವಾರು ಕ್ಲಿಷ್ಟಕರವಾದ ಅಂಶಗಳ ಬಗ್ಗೆ ಇರುವ ಸಂದೇಹ, ಗೊಂದಲ ಹಾಗೂ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದಲ್ಲಿ ಪ್ರತಿ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ಶಿಕ್ಷಕರನ್ನು ನೇಮಿಸಲಾಗಿದೆ. ಸಹಾಯವಾಣಿಗೆ ಶಾಲಾ ವೇಳೆಯಲ್ಲಿ ಸಂಪರ್ಕಿಸಿದಲ್ಲಿ ವಿಷಯವಾರು ಶಿಕ್ಷಕರು ತಮ್ಮ ಸಂದೇಹಗಳನ್ನು ಬಗೆಹರಿಸಲಿದ್ದಾರೆ.
*ವಿಷಯವಾರು ಸಂಪನ್ಮೂಲ ಶಿಕ್ಷಕರು ಮತ್ತು ಅವರ ಮೊಬೈಲ್ ವಿವರ:*
ಇಂಗ್ಲಿಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಸೋಮವಾರ ಶಾಲಾ ನಡೆಯುವ ವೇಳೆಯಲ್ಲಿ ಮಾಹಿತಿಗಾಗಿ ಬಳ್ಳಾರಿ ಬಾಪೂಜಿನಗರ ಸರ್ಕಾರಿ ಪ್ರೌಢಶಾಲೆಯ ಮಧುಸೂಧನ್ ಅವರ ಮೊ:8792134436, ಅಂದ್ರಾಳ್ ಸರ್ಕಾರಿ ಪ್ರೌಢಶಾಲೆಯ ವಿಜಯಭೂಷಣ ಜೋಶಿ ಅವರ ಮೊ:9844394840, ಬಳ್ಳಾರಿ ವಿಡಿಎಚ್‍ಎಲ್ ಬಿ.ಆರ್.ಮಹೇಶ ಅವರ ಮೊ:9448632895, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಅನಿತಾ ಮೊ:64364652124. ತಂಡದ ಮೇಲ್ವಿಚಾರಕರಾದ ಶಿಕ್ಷಣಾಧಿಕಾರಿ ಹಾಗೂ ಡಿ.ವೈ.ಪಿ.ಸಿ, ಎಸ್.ಎಸ್.ಕೆ ನೋಡಲ್ ಅಧಿಕಾರಿ ಇಂದ್ರಾಣಮ್ಮ ಮೊ.9740113925 ಇವರಿಗೆ ಸಂಪರ್ಕಿಸಬಹುದು.
ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಮಂಗಳವಾರ ಶಾಲಾ ನಡೆಯುವ ವೇಳೆಯಲ್ಲಿ ಬಸಮ್ಮ ಅನುದಾನಿತ ಪ್ರೌಢಶಾಲೆಯ ಬಿ.ಎಂ.ನಾಗರಾಜಯ್ಯ ಮೊ:9986861964, ಡಿ.ಅಂತಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ವಿ.ಆನಂದ ಮೊ:9886680134, ಹಿರಾಳ್‍ಕುಡಂ ಸರ್ಕಾರಿ ಉರ್ದು ಪ್ರೌಢಶಾಲೆಯ ಸೈಯದ್ ಇರ್ಫಾನ್ ಮೊ.9481047568, ಕುರುಗೋಡ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಅರುಣ್ ಮೊ.9844080610, ಕೊಳಗಲ್ ಸರ್ಕಾರಿ ಪ್ರೌಢಶಾಲೆಯ ಜಯರಾಜ್.ಕೆ.ಆರ್ ಮೊ.9845002181, ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ಪರಿವೀಕ್ಷಕ ಎಂ.ಬಸವರಾಜ ಮೊ.7795353576 ಇವರಿಗೆ ಸಂಪರ್ಕಿಬಹುದು.
ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಬುಧವಾರ ಎಸ್‍ಇಎಸ್ ಬಾಲಕೀಯರ ಪ್ರೌಢಶಾಲೆಯ ಕಲ್ಲಯ್ಯ ಹಿರೇಮಠ ಮೊ:9164516695, ಕುರುಗೋಡು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ಶ್ರೀಕಾಂತ ಮೊ:9481436365, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಹೆಚ್.ಈಶ್ವರಪ್ಪ ಮೊ:9449300605, ಜಾನೆಕುಂಟೆ ಸರ್ಕಾರಿ ಪ್ರೌಢಶಾಲೆಯ ರಾಜಶೇಖರ ಗೌಡ.ಹೆಚ್ ಮೊ.9481415847, ತೋರಣಗಲ್ಲು ಸರ್ಕಾರಿ ಪ್ರೌಢಶಾಲೆಯ ದೊಡ್ಡಬಸವ ಮೊ.9110228893, ಎಂ.ಸೂಗೂರು ಸರ್ಕಾರಿ ಪ್ರೌಢಶಾಲೆಯ ದೇವಪ್ಪ ಮೊ.998075610, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಜಮೇದಾರ್.ಆರ್.ಕೆ ಮೊ.9480993366 ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಹೆಚ್.ವೀರೇಶಪ್ಪ ಮೊ.9945681455 ಗೆ ಸಂಪರ್ಕಿಸಬಹುದು.
ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಗುರುವಾರ ಸಂಡೂರು ಛತ್ರಪತಿ ಶಿವಾಜಿ ವಿದ್ಯಾಮಂದಿರ ವಿಶ್ವನಾಥ.ಎಂ. ಮೊ. 8660768012, ಬಳ್ಳಾರಿಯ ಕಪಗಲ್ ರಸ್ತೆಯ ಪ್ರೌಢಶಾಲೆಯ ವಿಶ್ವನಾಥ ಮೊ:9591566856, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಗಾದಿಲಿಂಗಪ್ಪ ಮೊ:9481435994, ಅನುದಾನಿತ ಉರ್ದು ಪ್ರೌಢಶಾಲೆಯ ವಾಯಿದಾ ಗಾಲಿಬ್ ಮೊ.9380565461, ದಮ್ಮೂರು ಸರ್ಕಾರಿ ಪ್ರೌಢಶಾಲೆಯ ಸುಮ ಮೊ.9663592157, ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಎಪಿಸಿ, ಎಸ್‍ಎಸ್‍ಕೆಯ ಹೆಚ್.ವಿ.ಶಿವಾಲಿಂಗಾರೆಡ್ಡಿ ಮೊ.9449448187 ಇವರಿಗೆ ಸಂಪರ್ಕಿಸಬಹುದು.
ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶುಕ್ರವಾರ ದೋಣಿಮಲೈ ಸರ್ಕಾರಿ ಪ್ರೌಢಶಾಲೆಯ ನಾಗರಾಜ ಮೊ.9902779033, ಎಂ.ಸೂಗುರು ಸರ್ಕಾರಿ ಪ್ರೌಢಶಾಲೆಯ ರವಿ.ಆರ್ ಮೊ.9880019171, ಕೋಳುರು ಸರ್ಕಾರಿ ಪ್ರೌಢಶಾಲೆಯ ಹುಲೆಪ್ಪ ಮೊ.9483480302, ಮಿಲ್ಲರಪೇಟೆ ಸರ್ಕಾರಿ ಉರ್ದು ಪ್ರೌಢಶಾಲೆಯ ಹನುಮಪ್ಪ ಮೊ.9008474366, ಬಳ್ಳಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹರಿಪ್ರಸಾದ್ ಮೊ.8722517436. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯದ ಪರಿವೀಕ್ಷಕ ಎ.ಕೆ.ಸತ್ಯನಾರಾಯಣ ಮೊ.9740738762 ಗೆ ಸಂಪರ್ಕಿಸಬಹುದು.
ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶನಿವಾರ ಕುಡಿತಿನಿ ಪ್ರೌಢಶಾಲೆಯ ಮೊಹ್ಮದ ಜಾಫರ್ ಸಾದಿಕ್ ಮೊ:9945721814, ರೇಡಿಯೋ ಪಾರ್ಕ ಸರ್ಕಾರಿ ಪ್ರೌಢಶಾಲೆಯ ಟಿ.ಲಕ್ಷ್ಮೀ ಮೊ:9480753806, ಬಂಡಿಹಟ್ಟಿ ಪ್ರೌಢಶಾಲೆಯ ರಾಮತುಳಸಿ ಮೊ:9880842333, ಬಳ್ಳಾರಿ ಎಸ್.ಆರ್.ಕಾಲೋನಿ ಸರಕಾರಿ ಪ್ರೌಢಶಾಲೆಯ ಮೆಹಬೂಬ್ ಬಾಷಾ ಮೊ:9739458747. ತಂಡದ ಮೇಲ್ವಿಚಾರಕ ಸರ್ಕಾರಿ ಪ್ರೌಢ ಶಾಲೆ ಸಿ.ಬಿ ಮುಖ್ಯಗುರುಗಳಾದ ಶಿವಕುಮಾರ ಅವರ ಮೊ.9916992857 ಗೆ ಸಂಪರ್ಕಿಸಬಹುದು.
ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ದೂ.08392-268239 ಹಾಗೂ ಮೊ.9448999329 ಗೆ ಸಂಪರ್ಕಿಸಬಹುದು.
ವಿದ್ಯಾರ್ಥಿಗಳು ವಿಷಯಗಳ ಕುರಿತು ತಮಗಿರುವ ಸಂದೇಹಗಳ ಬಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಲು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರುಗಳು ಸೇರಿದಂತೆ ಎಲ್ಲರು ಶ್ರಮಿಸಬೇಕು ಮತ್ತು ಸಹಕಾರವೂ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
------
ಸಮುದಾಯದಲ್ಲಿ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಡಿಹೆಚ್‍ಒ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜೀವಕ್ಕೆ ಅಪಾಯ ಒದಗಿಸಬಹುದಾದ ಸೊಳ್ಳೆ ಕಚ್ಚುವಿಕೆಯಿಂದ ಬರುವ ಡೆಂಗ್ಯೂ, ಮಲೇರಿಯಾ ಸೇರಿದಂತೆ ಚಿಕಿನ್‍ಗುನ್ಯಾ, ಆನೆಕಾಲು, ಮೆದುಳು ಜ್ವರ ಮುಂತಾದವುಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ನಿಂತ ನೀರಿನ ತಾಣಗಳ ಸೂಕ್ತ ನಿರ್ವಹಣೆ ಮತ್ತು ಪರಿಣಾಮಕಾರಿಯಾಗಿ ಕೈಗೊಳ್ಳಲು ಪ್ರತಿಯೊಬ್ಬರು ಮನಃ ಪೂರ್ವಕವಾಗಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‍ಬಾಬು ಅವರು ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಘಟಕ ಇವರಿಂದ ಜಿಲ್ಲೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಸುರಕ್ಷಾ ಅಧಿಕಾರಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಕಂಡುಬರುತ್ತಿದ್ದ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಪ್ರಸ್ತುತ ವರ್ಷ ಪೂರ್ತಿ ಕಂಡುಬರುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಅಂಶವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ತಮ್ಮ ನೀರು ಸಂಗ್ರಹಣೆಯ ವಿಧಾನಗಳ ನಿರ್ವಹಣೆಯನ್ನು ಜನತೆಗೆ ಅರ್ಥವಾಗುವ ರೀತಿಯಲ್ಲಿ ತಿಳಿಸುವ ಮೂಲಕ ಬದಲಾವಣೆ ತರಬೇಕಾಗಿದೆ ಎಂದು ತಿಳಿಸಿದರು.
ಪ್ರತಿ ಶನಿವಾರ ನೀರು ಸಂಗ್ರಹಗಳನ್ನು ಖಾಲಿ ಮಾಡಿಸುವ ಹಾಗೂ ಕನಿಷ್ಟ 2 ಗಂಟೆಗಳ ಒಣಗಿಸುವ ಪ್ರಕ್ರಿಯೆ ನಂತರ ನೀರು ತುಂಬಿಸಿ ಸರಿಯಾಗಿ ಮುಚ್ಚಳವನ್ನು ಮುಚ್ಚಿಸುವ ಕುರಿತು ತಿಳಿಸುವ ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಣ ಮಾಡುವ ಕಾರ್ಯ ಕೈಗೊಳ್ಳಬೇಕು ಎಂದರು.
ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯ ಸಿಬ್ಬಂದಿ ವರ್ಗದವರು ಸೊಳ್ಳೆ ಮರಿಗಳನ್ನು (ಲಾರ್ವ) ಪ್ರಾತ್ಯಕ್ಷತೆಯನ್ನು ಕೈಗೊಳ್ಳುವ ಮೂಲಕ ಬಾಲಹುಳಗಳು ಎಂಬ ರೂಢಿ ಹೆಸರಿನಲ್ಲಿರುವ ಸೊಳ್ಳೆಯ ಮರಿಗಳನ್ನು ನಿಯಂತ್ರಣ ಮಾಡಲು ಸೂಕ್ರ ಕ್ರಿಯಾ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಾಕಡಿ, ಎನ್.ವಿ.ಬಿ.ಡಿ.ಸಿ.ಪಿ ಸಲಹೆಗಾರರಾದ ಪ್ರತಾಪ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿರುಪಾಕ್ಷಿ, ರವೀಂದ್ರ ಜಿನಗ ಸೇರಿದಂತೆ ಇತರೆ ಸಿಬ್ಬಂದಿಯವರು ಹಾಜರಿದ್ದರು.
--------
ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಆಚರಣೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಹೊಂಗಿರಣದಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಜಯಂತಿಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರಾಚೀನ ಭಾರತದಲ್ಲಿ ಸಾಮಾಜಿಕ ಸುಧಾರಣೆಯಲ್ಲಿ ಹೆಚ್ಚು ಒತ್ತು ನೀಡಿದವರಾಗಿದ್ದರು ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಸಮಾಜದ ಮುಖಂಡರು ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.
*ನುಲಿಯ ಚಂದಯ್ಯ ಜಯಂತಿ ಆಚರಣೆ:*
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನುಲಿಯ ಚಂದಯ್ಯ ಜಯಂತಿಯನ್ನು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಹೊಂಗಿರಣದಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಯಂತಿಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಗೂ ಕಚೇರಿಯ ಸಿಬ್ಬಂದಿ ಹಾಜರಿದ್ದರು.
--------
ಬುಧವಾರ, ಆಗಸ್ಟ್ 30, 2023
ಸೆ.02ರಂದು ತಾಪಂ ಕೆಡಿಪಿ ಸಭೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲೂಕು ಪಂಚಾಯಿತಿಯ ತ್ರೈಮಾಸಿಕ ಕೆಡಿಪಿ ಸಭೆಯು ಸೆ.02 ರಂದು ಬೆಳಿಗ್ಗೆ 10.30 ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ವಿವಿಧ ಯೋಜನೆಯ ಪ್ರಗತಿ ವರದಿಯನ್ನು 10 ಪ್ರತಿಗಳಲ್ಲಿ ಆ.31 ರೊಳಗಾಗಿ ವಿಷಯ ನಿರ್ವಾಹಕ ರಾಮಕೃಷ್ಣ ಇವರಿಗೆ ಸಲ್ಲಿಸಬೇಕು. ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮಡಗಿನ ಬಸಪ್ಪ ಅವರು ತಿಳಿಸಿದ್ದಾರೆ.
-------
ಅಂಚೆ ಇಲಾಖೆಯಿಂದ ರಾಷ್ಟಮಟ್ಟದ ಪತ್ರಲೇಖನ ಸ್ಪರ್ಧೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಭಾರತೀಯ ಅಂಚೆ ಇಲಾಖೆಯು ಜನಸಾಮಾನ್ಯರಲ್ಲಿ ಹಾಗೂ ವಿಧ್ಯಾರ್ಥಿಗಳಲ್ಲಿ ಪತ್ರ ಲೇಖನ ಅಭಿರುಚಿಯನ್ನು, ಬರವಣಿಗೆ ಕೌಶಲ್ಯವನ್ನು ಹಾಗೂ ದೇಶಪ್ರೇಮವನ್ನು ಜಾಗೃತಿಗೊಳಿಸಲು ದೇಶ್ಯಾದ್ಯಂತ ರಾಷ್ಟಮಟ್ಟದ ಮುಕ್ತ ಪತ್ರಲೇಖನ ಸ್ಪರ್ಧೆಯನ್ನು ಏರ್ಪಡಿಸಿದೆ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕವರ ಕಚೇರಿಯ ಅಂಚೆ ಅಧೀಕ್ಷಕ ವಿ.ಎಲ್.ಚಿತಕೋಟೆ ಅವರು ತಿಳಿಸಿದ್ದಾರೆ.
ನವಭಾರತ ನಿರ್ಮಾಣಕ್ಕಾಗಿ ಡಿಜಿಟಲ್ ಇಂಡಿಯಾ (Digital India for New India) ಎಂಬ ವಿಷಯದ ಮೇಲೆ ಎ4 ಅಳತೆಯ ಹಾಳೆಯಲ್ಲಿ 1000 ಪದಗಳ ಮಿತಿಯೊಳಗೆ ಬರೆದು ಎನ್ವೊಲಾಪ್ (ಇಓಗಿಇಐಔPಇ) ಅಥವಾ ಐಎಲ್‍ಸಿ (ಇನ್ ಲ್ಯಾಂಡ್) ಅಂತರ್ದೇಶೀಯ ಪತ್ರದಲ್ಲಿ 500 ಪದಗಳಿಗೆ ಮೀರದಂತೆ ಬರೆದು, ಸ್ಪರ್ಧಿಗಳು ಅಂಚೆ ಅಧಿಕ್ಷಕರು, ಬಳ್ಳಾರಿ ವಿಭಾಗ, ಬಳ್ಳಾರಿ 583102 ಇವರಿಗೆ ತಲುಪುವಂತೆ ಅಂಚೆ ಮೂಲಕ ಕಳಿಹಿಸಿಕೊಡಬಹುದು.
18 ವರ್ಷ ಒಳಗಿನ ಮತ್ತು 18 ವರ್ಷ ಮೇಲ್ಪಟ್ಟ ಎಂಬ ಎರಡು ವಿಭಾಗಗಳಿದ್ದು ರಾಷ್ಟಮಟ್ಟದ ಪ್ರತಿವಿಭಾಗಕ್ಕೆ ಅತ್ತ್ಯುತ್ತಮ ಪತ್ರಕ್ಕೆ ರೂ.50 ಸಾವಿರ ಹಾಗೂ ರಾಜ್ಯಮಟ್ಟದ ಅತ್ತ್ಯುತ್ತಮ ಪತ್ರಕ್ಕೆ ರೂ.25 ಸಾವಿರ ಬಹುಮಾನ ಹಾಗೂ ದ್ವಿತೀಯ, ತೃತೀಯ ಬಹುಮಾನಗಳು ನೀಡಲಾಗುತ್ತದೆ.
ಪತ್ರವನ್ನು ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯಬಹುದಾಗಿದ್ದು, ಪತ್ರಗಳನ್ನು ಅಕ್ಟೋಬರ್ 31 ಒಳಗೆ ತಲುಪಿಸಬೇಕು. ಮುದ್ರಿತ ಪತ್ರಗಳನ್ನು ಸ್ವೀಕರಿಸುವುದಿಲ್ಲ.
ಬಳ್ಳಾರಿ ವಿಭಾಗದ ವ್ಯಾಪ್ತಿಯ ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಹಾಗೂ ದೂ.08392-266037 ಅಥವಾ ನಾಗರಾಜ್ ರಾವ್ ಮೊ.8660295657 ಗೆ ಸಂಪರ್ಕಿಸಬಹುದು ಎಂದು ಅಂಚೆ ಅಧೀಕ್ಷಕರು ವಿ.ಎಲ್.ಚಿತಕೋಟೆ ಅವರು ತಿಳಿಸಿದ್ದಾರೆ.
-------
10 ದಿನಗಳ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 3ನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ.
ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು ಮತ್ತು ಬರೆಯಲು ತಿಳಿದಿರಬೇಕು. ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ, ಇಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.7483538942, 9449226221 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಅಂಚೆ ಇಲಾಖೆಯಿಂದ 2023-24ನೇ ಸಾಲಿಗೆ ಸ್ಪರ್ಶ್ ಮತ್ತು ಫಿಲಾಟೆಲಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಹವ್ಯಾಸಗಳ ರಾಜನೆಂದು ಕರೆಯಲ್ಪಡುವ ಅಂಚೆ ಸಂಗ್ರಹ (ಪಿಲಾಟೆಲಿ) ಅಭಿರುಚಿಯನ್ನು ಶಾಲಮಕ್ಕಳಲ್ಲಿ ಪ್ರಚಾರ ಪಡಿಸಲು ಮತ್ತು ಉತ್ತೇಜಿಸಲು ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ (SPARSH - Scholarship for Promotion of Aptitude &Research in Stamps as Hobby) ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.
ಮಕ್ಕಳಲ್ಲಿ ಸದಾಭಿರುಚಿಯನ್ನು ಸುಸ್ಥಿರಗೊಳಿಸಲು ಮತ್ತು ಪಠ್ಯಕ್ಕೆ ಪೂರಕವಾದ ಜ್ಞಾನಾರ್ಜನೆ ಮಾಡಲು ಫಿಲಾಟೆಲಿ ಉತ್ತಮ ವೇಧಿಕೆಯನ್ನು ಒದಗಿಸುತ್ತದೆ. ಈ ಯೋಜನೆಯ ಲಾಭಪಡೆಯಲು ವಿದ್ಯಾರ್ಥಿಯು 6ನೇ ತರಗತಿಯಿಂದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ್ಲ ಶೇ.60 ಅಂಕಗಳಿಸಿರಬೇಕು. ಜೊತೆಗೆ ತನ್ನ ಹೆಸರಿನಲ್ಲಿ ಅಂಚೆ ಚೀಟಿ ಸಂಗ್ರಹ ಖಾತೆಯನ್ನು ಹೊಂದಿರಬೇಕು ಇಲ್ಲವೇ ಶಾಲಾ ಫಿಲಾಟೆಲಿ ಕ್ಲಬ್‍ನ ಸದಸ್ಯನಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗೆ ವಾರ್ಷಿಕ ರೂ.6000 ವಿಧ್ಯಾರ್ಥಿವೇತನ ನೀಡಲಾಗುವುದು.
ರಸಪ್ರಶ್ನೆ ಸ್ಪರ್ಧೆ ಮತ್ತು ಫಿಲಟೆಲಿ ಪ್ರಾಜೆಕ್ಟ್‍ನ ಆಧಾರದಲ್ಲಿ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಕೊನೆ ದಿನ ಸೆ.15 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ನಾಗರಾಜ್ ರಾವ್ ಅವರ ಮೊ. 8660295657 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕವರ ಕಚೇರಿಯ ಅಂಚೆ ಅಧೀಕ್ಷಕ ವಿ.ಎಲ್.ಚಿತಕೋಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇಲಾಖೆಯ ಕಾರ್ಯವನ್ನು ಇಷ್ಟಪಟ್ಟು ಮಾಡಿದಾಗ ಸಾಧನೆ ತಾನಾಗಿಯೇ ಬರಲಿದೆ: ಡಾ.ಹೆಚ್.ಎಲ್.ಜನಾರ್ಧನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಜೀವನದ ಪ್ರತಿಯೊಂದು ಹಂತದಲ್ಲಿ ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕಾರ್ಯನಿರ್ವಹಿಸಿದರೆ ಯಶಸ್ವಿ ಸಾಧ್ಯವೆಂದು ಬಳ್ಳಾರಿಯ ನಿರ್ಗಮಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಎಲ್.ಜನಾರ್ಧನ್ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕೋವಿಡ್ ಸಮಯದಲ್ಲಿ ಜಿಲ್ಲೆಗೆ ಆಗಮಿಸಿ ಸುಮಾರು 03 ವರ್ಷ 10 ತಿಂಗಳ ಕಾಲ ಜನತೆಗೆ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಲು ಪ್ರಮಾಣಿಕವಾಗಿ ಪ್ರಯತ್ನಿಸಿರುವೆ ಎಂದರು.
ನನಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಆರೋಗ್ಯ ಇಲಾಖೆಯ ಸಚಿವರನ್ನೊಳಗೊಂಡಂತೆ ಜಿಲ್ಲೆಯ ಜನ ಪ್ರತಿನಿಧಿಗಳಿಗೆ ಹಿರಿಯ ಅಧಿಕಾರಿಗಳಿಗೆ, ಸಲಹೆ ಸೂಚನೆಗಳ ಮೂಲಕ ಮಾರ್ಗದರ್ಶನ ಮಾಡಿದ ನಿರ್ದೇಶನಾಲಯದ ಎಲ್ಲಾ ಹಿರಿಯ ವೈದ್ಯರು ಮತ್ತು ಅಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಹಕಾರ ನೀಡಿದ ವಿಮ್ಸ್ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಪ್ರಾಂಶುಪಾಲರು, ಎಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ವೈದ್ಯ ಬಾಂಧವರಿಗೆ, ಪ್ರೀತಿಯ ಆರೋಗ್ಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ, ಮಾಧ್ಯಮ ಮಿತ್ರರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಮಾತನಾಡಿ, ನೇರ ನುಡಿಯ ಅಧಿಕಾರಿಯಾಗಿ ಜಿಲ್ಲಾಡಳಿತದ ಮೂಲಕ ಆಸ್ಪತ್ರೆಗಳ ಉನ್ನತೀಕರಣಕ್ಕೆ 29 ಕೋಟಿ ಡಿಎಂಎಫ್ ಅನುದಾನ ಒದಗಿಸಿಕೊಂಡಿದ್ದು ಹೆಮ್ಮೆಪಡುವ ಸಾಧನೆಯಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಹುದ್ದೆ ಅಲಂಕರಿಸಲಿ ಎಂದು ಇದೇ ಸಂದರ್ಭದಲ್ಲಿ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅರ್ ಅನೀಲಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ಆರ್‍ಎಂಓ ಡಾ.ವಿಶ್ವನಾಥ, ಆಡಳಿತ ಅಧಿಕಾರಿ ಮೆಹಬೂನ ಖಾನ ಸೇರಿದಂತೆ ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಯವರು, ಸಾರ್ವಜನಿಕರು ಉಪಸ್ಥಿತರಿದ್ದರು.
-----
ಶ್ರೀ ಕೃಷ್ಣ ಜಯಂತಿ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ ಜಿಲ್ಲಾಡಳಿತದಿಂದ ಸೆ.06ರಂದು ಶ್ರೀ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರ್
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 06 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಬುಧವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೆಪ್ಟೆಂಬರ್ 06 ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ನಗರದ ದುರ್ಗಮ್ಮ ಗುಡಿಯಿಂದ ಗಡಿಗಿ ಚೆನ್ನಪ್ಪ ವೃತ್ತಪ್ಪ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನ ಸಭಾಂಗಣದವರೆಗೆ ಮೆರೆವಣಿಗೆ ನಡೆಯಲಿದ್ದು, ಪೊಲೀಸರು ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಹೊನ್ನುರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.
------
ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮನೆಯ ಯಜಮಾನಿಗೆ ಶಕ್ತಿ ತುಂಬುವ ಕೆಲಸವಾಗಿದೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಪ್ರತಿ ಬಡ ಕುಟುಂಬದ ಕಣ್ಣಾಗಿರುವ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಆರ್ಥಿಕ ಶಕ್ತಿ ತುಂಬುವ ಕೆಲಸ ಈ ದಿನ ಆಗಿದೆ ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶ ಇವರ ಸಂಯುಕ್ತಾಶ್ರಯದಲ್ಲಿ ‘ನಾನೇ ಯಜಮಾನಿ... ನಾನೇ ಗೃಹಲಕ್ಷ್ಮಿ' ಎಂಬ ಆಶಯದೊಂದಿಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ (ಮಾ.ಪು) ಹೈಸ್ಕೂಲ್ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರವು ರಾಜ್ಯದ ಮಹಿಳೆಯರ ಮತ್ತು ತಾಯಂದಿರ ಕುಟುಂಬದ ನಿರ್ವಹಣೆಯ ಕಷ್ಟವನ್ನರಿತು, ಗೃಹಲಕ್ಷ್ಮಿ ಯೋಜನೆ ರೂಪಿಸಿದೆ. ಮನೆಯಲ್ಲಿ ಯಾವ ಹೆಣ್ಣು ಸಂತೋಷದಿಂದ ಇರುತ್ತಾಳೆಯೋ, ಆ ಮನೆಯ ಕುಟುಂಬ ಬೆಳಗುತ್ತದೆ. ಕುಟುಂಬದ ನಿರ್ವಹಣೆಗೆ ಬೇಕಾದ ಅಗತ್ಯ ಸೇವೆಗಳನ್ನು ಪಡೆಯಲು, ಕುಟುಂಬದ ನಿರ್ವಹಣೆಗೆ ಬೇಕಾದ ಸಾಮಗ್ರಿ ಕೊಂಡುಕೊಳ್ಳಲು, ಆಸ್ಪತ್ರೆಯ ಖರ್ಚಿಗೆ, ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಇತರೆ ಸೌಲಭ್ಯ ಹೊಂದಲು ಸಹಾಯವಾಗುತ್ತದೆ ಎಂದು ಹೇಳಿದರು.
ಮಹಿಳೆಯರು ಉಚಿತವಾಗಿ ಬಸ್‍ಗಳಲ್ಲಿ ಪ್ರಯಾಣಿಸುವಂತಹ ಶಕ್ತಿ ಯೋಜನೆಯಿಂದ ದೂರದ ಆಸ್ಪತ್ರೆಗಳಿಗೆ ಹೋಗಿ ಬರಲು, ರಾಜ್ಯದ ದೇವಸ್ಥಾನಗಳಿಗೆ ಭೇಟಿ ನೀಡಲು ಹಾಗೂ ಹೆಣ್ಣುಮಕ್ಕಳು ತಮ್ಮ ತವರು ಮನೆಗೆ ಹೋಗಿ ಬರಲು ಉಪಯೋಗವಾಗಿದೆ. ಅನ್ನಭಾಗ್ಯ ಯೋಜನೆಯಿಂದ ಹಸಿವುಮುಕ್ತ ರಾಜ್ಯವನ್ನಾಗಿಸಲು ಸಹಕಾರಿಯಾಗಿದೆ. ಗೃಹಜ್ಯೋತಿಯಿಂದ ಮನೆ-ಮನಗಳು ಬೆಳಗುತ್ತಿವೆ ಎಂದರು.
ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆತಿದೆ. ರಾಜ್ಯದ ಇತಿಹಾಸದಲ್ಲಿಯೇ ಈ ದಿನ ಅತ್ಯಂತ ಮಹತ್ವದ ದಿನವಾಗಿದೆ ಎಂದು ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ನಮ್ಮ ಸರ್ಕಾರ ಜಾರಿಗೆ ಬಂದು 100 ದಿನ ಪೂರೈಸಿದ್ದು, ನಮ್ಮ ಸಾಧನೆ ನಮ್ಮ ಕಾರ್ಯಗಳನ್ನು ಜನರ ಮುಂದೆ ಇಡುವ ಮೂಲಕ ನಮ್ಮದು ಬಡವರ ಪರ ಸರ್ಕಾರ ಎಂದು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದರು.
ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ಐದು ಯೋಜನೆಗಳಲ್ಲಿ 4 ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದರು.
*ಜಿಲ್ಲೆಯ ಅರ್ಹ ಫಲಾನುಭವಿ ಮಹಿಳೆಯರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ವೆಚ್ಚ ಮಾಹಿತಿ:*
ಪರಿಶಿಷ್ಟ ಜಾತಿ ಫಲಾನುಭವಿಗಳು: 47,202 ಫಲಾನುಭವಿಗಳಿಗೆ ಆಗುವ ವೆಚ್ಚ ರೂ.9,44,04,000.
ಪರಿಶಿಷ್ಟ ಪಂಗಡ ಫಲಾನುಭವಿಗಳು: 48,133 ಫಲಾನುಭವಿಗಳಿಗೆ ಆಗುವ ವೆಚ್ಚ ರೂ.9,62,66,000.
ಇತರೆ: 1,52,092 ಫಲಾನುಭವಿಗಳಿಗೆ ರೂ.30,41,84,000 ವೆಚ್ಚ ಆಗಲಿದ್ದು, ಒಟ್ಟು ಜಿಲ್ಲೆಯ 2,47,427 ಫಲಾನುಭವಿಗಳಿಗೆ ಈ ಆಗಸ್ಟ್ ಮಾಹೆಯಲ್ಲಿ ಒಟ್ಟು ರೂ.49,48,54,000 ಪಾವತಿಯಾಗಲಿದೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯು ಪ್ರಾರಂಭದಿಂದ ಇಲ್ಲಿಯವರೆಗೆ 3,01,180 ರೇಷನ್ ಕಾರ್ಡ್‍ಗಳ ಪೈಕಿ 2,59,161 (ಶೇ.86.05) ಫಲಾನುಭವಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ ರಾಜ್ಯದಲ್ಲಿ ನೊಂದಣಿ ಪ್ರಕ್ರಿಯೆಯಲ್ಲಿ ಜಿಲ್ಲೆಯು ಐದನೇ ಸ್ಥಾನದಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮತೀಯ ಭಾಂದವ್ಯ ಇಲ್ಲದೇ ನಗರದ ಎಲ್ಲಾರಿಗೂ ತಲುಪಿಸಲಾಗುತ್ತಿದೆ. ಅದರಂತೆಯೇ ನಗರದಲ್ಲಿ ಕುಡಿಯುವ ನೀರು, ಚರಂಡಿ ವ್ಯವಸ್ಥೆ ಸೇರಿದಂತೆ ಮೂತಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಮಾತನಾಡಿ, ಮಹಿಳೆಯರ ಅಭಿವೃದ್ದಿ ಮತ್ತು ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬರೂ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಉಪಮೇಯರ್ ಬಿ.ಜಾನಕಿ, ಪಾಲಿಕೆಯ ಮಾಜಿ ಮೇಯರ್ ಎಂ.ರಾಜೇಶ್ವರಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಮಹಿಳೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
--------
ಮಂಗಳವಾರ, ಆಗಸ್ಟ್ 29, 2023
ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮ ಆ.30ರಂದು
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶ ಇವರ ಸಂಯುಕ್ತಾಶ್ರಯದಲ್ಲಿ ಆ.30 ರಂದು ಬೆಳಿಗ್ಗೆ 11.30 ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ (ಮಾ.ಪು) ಹೈಸ್ಕೂಲ್ ಮೈದಾನದಲ್ಲಿ ‘ನಾನೇ ಯಜಮಾನಿ... ನಾನೇ ಗೃಹಲಕ್ಷ್ಮಿ’ ಎಂಬ ಆಶಯದೊಂದಿಗೆ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮ ನಡೆಯಲಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸಮಾರಂಭವನ್ನು ಉದ್ಘಾಟಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
--------
ವ್ಯಕ್ತಿ ಕಾಣೆ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ನಗರದ ಕೌಲ್‍ಬಜಾರ್ 25 ವಾರ್ಡ್‍ನ ಅಬ್ದುಲ್ ಸಲಾಂ ಸ್ಟ್ರೀಟ್ ಹತ್ತಿರ ನಿವಾಸಿ ಶೇಕ್ ಮೊಹಮದ್ ಮುಜೀಬುಲ್ಲಾ ಎನ್ನುವ 35 ವರ್ಷದ ವ್ಯಕ್ತಿಯು ಆ.19ರಂದು ಕಾಣೆಯಾಗಿರುವ ಕುರಿತು ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿ ಚಹರೆ ಗುರುತು: ಎತ್ತರ 5.6 ಅಡಿ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎರೆಡೂ ಕಾಲುಗಳಿಗೆ 6 ಬೆರಳುಗಳು ಇರುತ್ತವೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಮತ್ತು ಬಿಳಿ ಶರ್ಟ್ ಧರಿಸಿರುತ್ತಾನೆ. ಹಿಂದಿ, ಕನ್ನಡ, ತೆಲುಗು ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಪಿ.ಐ ಮೊ.9480803047 ಹಾಗೂ ಪಿಎಸ್‍ಐ ಮೊ.9480803085, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಶ್ರೀ ಕೃಷ್ಣ ಜಯಂತಿ ಅಂಗವಾಗಿ ಪೂರ್ವಸಿದ್ದತಾ ಸಭೆ ಆ.30ರಂದು
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 30ರಂದು ಮಧ್ಯಾಹ್ನ 12 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶ್‍ಬಾಬು ಅವರು ತಿಳಿಸಿದ್ದಾರೆ.
-----
ಸಿರುಗುಪ್ಪದಲ್ಲಿ ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕರ ರಕ್ಷಣೆ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಮಿಕ ಇಲಾಖೆಯಿಂದ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಹೋಬಳಿಯಲ್ಲಿ ವಿವಿಧೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ.
ಹೋಬಳಿ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಮುಖಾಂತರ ತೆಕ್ಕಲಕೋಟೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಿರುಗಪ್ಪ ರಸ್ತೆ, ಮತ್ತು ಬಳ್ಳಾರಿ ರಸ್ತೆಯ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಹಣ್ಣಿನ ಅಂಗಡಿ ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳೊಂದಿಗೆ ಆಕಸ್ಮಿಕ ದಾಳಿ ಮಾಡಿ 03 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಸಂಬಂದಿಸಿದ ಮಾಲೀಕರ ವಿರುದ್ದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಂದಾಯ ನಿರೀಕ್ಷಕ ಸುರೇಶ್, ಸಿ.ಆರ್.ಪಿ ಮೊಹಮ್ಮದ್ ಫಯಾಜ್, ಪಟ್ಟಣ ಪಂಚಾಯತಿಯ ಆರೋಗ್ಯ ನಿರೀಕ್ಷಕಿ ಅನ್ನಪೂರ್ಣ, ಕಾರ್ಮಿಕ ನಿರೀಕ್ಷಕ ಮಂಜುನಾಥ, ಬೆಂಗಳೂರು ಬಚಪನ್ ಬಚವೋ ಅಂದೋಲನ ಸಿಬ್ಬಂದಿ ಗಣೇಶ್, ಮಹಿಳಾ ಪೋಲಿಸ್ ಕಾನ್ಸ್‍ಟೇಬಲ್ ಶಾರದಾ, ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ಉಮೇಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ರಜಿನಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಬೋಜರಾಜ್ ಹಾಜರಿದ್ದರು.
-------
ಸೆ.03ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಸೆಪ್ಟೆಂಬರ್ 03 ರಂದು ಕರ್ನಾಟಕ ಶಿಕ್ಷಕರ ಅರ್ಹಾತ ಪರೀಕ್ಷೆ (ಕೆಎಆರ್‍ಟಿಇಟಿ-2023) ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 4.30 ರವರೆಗೆ ನಗರದ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚಲು ಷರತ್ತಿಗೊಳಪಟ್ಟು ಆದೇಶಿಸಿದೆ ಹಾಗೂ ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳನ್ನು ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
-------
ನೇರ ಸಂದರ್ಶನ ಸೆ.01ರಂದು
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆಪ್ಟೆಂಬರ್ 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
*ವಿದ್ಯಾರ್ಹತೆ:* ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ವಿದ್ಯಾರ್ಥಿವೇತನ ಅರ್ಜಿ ಪರಿಶೀಲನೆಗೆ ಅವಧಿ ವಿಸ್ತರಣೆ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಳೆದ 2022-2023ನೇ ಸಾಲಿನ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಯೋ ಮೆಟ್ರಿಕ್ ಅಥೆಂಟಿಕೇಷನ್ ಮತ್ತು ಅರ್ಜಿಗಳನ್ನು ಪರಿಶೀಲನೆ ಮಾಡಲು ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಆಧಾರ್ ಕಾರ್ಡ್, ಖಾತೆ ಸಂಖ್ಯೆ ಅಪ್‍ಲೋಡ್ ಮಾಡಲು ಈ ಮೊದಲು ಆ.28 ಕೊನೆದಿನವಾಗಿದ್ದು, ಅದನ್ನು ಆ.31ರ ವರೆಗೆ ವಿಸ್ತರಿಸಲಾಗಿದೆ. ಬಯೋಮೆಟ್ರಿಕ್ ಅಥೆಂಟಿಕೇಷನ್ ಮಾಡಲು ಸಹ ಈ ಮೊದಲು ಆ.25 ಕೊನೆದಿನವಾಗಿದ್ದು, ಅದನ್ನು ಆ.29ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿದಾರರು ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಷನ್ ಮಾಡಲು ಆ.25 ಕೊನೆದಿನವಾಗಿದ್ದು, ಅದನ್ನು ಆ.31ರ ವರೆಗೆ ವಿಸ್ತರಿಸಲಾಗಿದೆ. ಇನ್ನು ಅರ್ಜಿಗಳನ್ನು ಪರಿಶೀಲನೆ ಮಾಡಲು ಐಎನ್‍ಒ, ಎಸ್‍ಎನ್‍ಒಗೆ ಆ.27, 31 ಕೊನೆಯದಿನವಾಗಿದ್ದು, ಇದೀಗ ಸೆ.6, ಸೆ.8ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಹಾಗೂ ದೂ.ಸಂ:ಬಳ್ಳಾರಿ-08392-245755 & 8310321101, ಸಿರುಗುಪ್ಪ-9148889975, ಸಂಡೂರು-9036925966 ಹಾಗೂ ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೆಲ್ಪ್‍ಲೈನ್ ನಂ:8277799990 (24/7) ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಧ್ಯಾನ್ ಚಂದ್ ಅವರ ಆದರ್ಶ ಗುಣಗಳು ಮತ್ತು ಸಾಧನೆ ಎಲ್ಲರಿಗೂ ಮಾದರಿ: ಡಾ.ಸಾಹೇಬ ಅಲಿ ಹೆಚ್.ನಿರಗುಡಿ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಧ್ಯಾನ್ ಚಂದ್ ಅವರ ಕ್ರೀಡೆಯ ಮೇಲಿನ ಪ್ರೀತಿ, ದೇಶಭಕ್ತಿ ಮತ್ತು ಅವರ ಸಾಧನೆ ನಮ್ಮ ನಿಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ವಿಜಯನಗರ ಶ್ರೀಕೃಷ್ಟದೇವರಾಯ ವಿಶ್ವವಿದ್ಯಾಲಯದ ಕುಲಪತಿ ಡಾ.ಸಾಹೇಬ ಅಲಿ ಹೆಚ್.ನಿರಗುಡಿ ಅವರು ಅಭಿಪ್ರಾಯಪಟ್ಟರು.
ಅವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ತ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಮಂಗಳವಾರದಂದು ಜರುಗಿದ ಶಾಲಾಂತರ್ಗತ ಗುಡ್ಡಗಾಡು ಓಟ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ದಿಗ್ಗಜ ಆಟಗಾರ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಲು ಭಾರತ ಸರ್ಕಾರವು 2012ರಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಇಂದಿಗೂ ಮುಂದುವರಿಸಿಕೊಂಡು ಬಂದಿದೆ ಎಂದರು.
ಮೇಜರ್ ಧ್ಯಾನ್‍ಚಂದ್ ಅವರು 1926 ರಿಂದ 1948 ರವರೆಗಿನ ತಮ್ಮ ವೃತ್ತಿಜೀವನದಲ್ಲಿ 400 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಗೋಲುಗಳನ್ನು ಗಳಿಸಿದ್ದಾರೆ ಮತ್ತು ಅವರ ಸಂಪೂರ್ಣ ವೃತ್ತಿಜೀವನದಲ್ಲಿ ಸುಮಾರು 1,000 ಗೋಲುಗಳನ್ನು ಗಳಿಸಿದ್ದಾರೆ.
1928, 1932, 1936ರ ಮೂರು ಒಲಂಪಿಕ್ಸ್‍ಗಳಲ್ಲಿ ಭಾರತ ದೇಶವು ಹಾಕಿಯಲ್ಲಿ ವಿಶೇಷ ಸ್ಥಾನ ದಾಖಲಿಸಲು ಧ್ಯಾನ್ ಚಂದ್ ಅವರ ಪರಿಶ್ರಮ ಅಪಾರವಾಗಿತ್ತು. ಅವರಿಗೆ 1956 ರಲ್ಲಿ ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು, ಇದು ಭಾರತದ ಮೂರನೇ ಅತಿದೊಡ್ಡ ನಾಗರಿಕ ಗೌರವವಾಗಿದೆ ಎಂದರು.
ದೈಹಿಕ ಶಿಕ್ಷಣ ವಿಭಾಗದ ಡಾ.ಶಶಿಧರ್ ಕೆಲ್ಲೂರ ಅಧ್ಯಕ್ಷತೆಯ ವಹಿಸಿ ಮಾತನಾಡಿ, ಇಡೀ ದೇಶವೇ ಹೆಮ್ಮೆಪಡುವಂತಹ ಅಪ್ರತಿಮ ಹುಟ್ಟು ಪ್ರತಿಭಾವಂತ ಧ್ಯಾನ್ ಚಂದ್ ಅವರ ಸಾಧನೆಯನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ.ಸಂಪತ್ ಕುಮಾರ್, ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮರಾಗಿ, ಯೋಗ ಉಪನ್ಯಾಸಕ ಮಹೇಶ್, ರಮೇಶ್ ಕೆ.ಡಿ, ಭಾರತಿ, ಮೌನಿಕ ಸೇರಿದಂತೆ ಎಂಪಿಡಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪದಕ ಮತ್ತು ಪಾರಿತೋಷಕಗಳನ್ನು ನೀಡಲಾಯಿತು
-------
ರೂ.10 ಮುಖಬೆಲೆಯ ನಾಣ್ಯ ಚಲಾವಣೆ, ಅಧೀಕೃತವಾಗಿ ಸ್ವೀಕರಿಸುವಂತೆ ಸೂಚನೆ: ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಆರ್.ಬಿ.ಐ.ವು ಸಾರ್ವಜನಿಕರ ವಹಿವಾಟಿನ ಅಗತ್ಯಗಳನ್ನು ಪೂರೈಸುವ ಸಲುವಾಗಿ ಕಾಲಕಾಲಕ್ಕೆ ನಾಣ್ಯಗಳನ್ನು ಪರಿಚಯಿಸುತ್ತಿದೆ. ಪ್ರಸ್ತುತ ರೂ.10 ಮುಖ ಬೆಲೆಯ ನಾಣ್ಯ ಚಲಾವಣೆಯಲ್ಲಿದ್ದು, ಅಧೀಕೃತವಾಗಿ ಅವುಗಳನ್ನು ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ವಹಿವಾಟು ಮತ್ತು ಪಾವತಿಗಾಗಿ ರೂ.10 ರೂಪಾಯಿ ನಾಣ್ಯವನ್ನು ಸ್ವೀಕರಿಸಲು ರಿಸರ್ವ್ ಬ್ಯಾಂಕ್ ತೆಗೆದುಕೊಂಡ ಜಾಗೃತಿ ಪ್ರಯತ್ನಗಳ ಹೊರತಾಗಿಯೂ, ಅಂಗಡಿಯವರು, ವ್ಯಾಪಾರಿಗಳು ಮತ್ತು ಸಾಮಾನ್ಯ ಸಾರ್ವಜನಿಕರು ರೂ.10 ನಾಣ್ಯಗಳ ಸ್ವೀಕಾರ ಮತ್ತು ಬಳಕೆಯನ್ನು ನಿರಾಕರಿಸುವುದನ್ನು ರಾಜ್ಯ ಆರ್ಥಿಕ ಇಲಾಖೆಯು ಗಮನಿಸಿದೆ.
ವ್ಯಾಪಾರಿಗಳು, ಸಾರ್ವಜನಿಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10 ನಾಣ್ಯಗಳನ್ನು ಸ್ವೀಕರಿಸಬೇಕು. ಭಾರತೀಯ ನಾಣ್ಯಗಳ ಕಾಯಿದೆ 2011 ರ ಸೆಕ್ಷನ್ 6ರ ಪ್ರಕಾರ ಅದರಲ್ಲಿ ನಿರ್ದಿಷ್ಟಪಡಿಸಿದ ನಾಣ್ಯಗಳು ಕಾನೂನುಬದ್ಧವಾಗಿರುತ್ತವೆ ಎಂದು ಅವರು ತಿಳಿಸಿದ್ದಾರೆ.
ಎಲ್ಲರೂ ದಿನ ನಿತ್ಯದ ವಹಿವಾಟುಗಳಿಗಾಗಿ ಸ್ವೀಕರಿಸಬಹುದಾಗಿದೆ. ರೂ.10 ನಾಣ್ಯಗಳನ್ನು ಸ್ವೀಕರಿಸದಿರುವುದು ನಾಣ್ಯ ಕಾಯ್ದೆ 2011 ರ ಸೆಕ್ಷನ್ 6(1) ರ ಉಲ್ಲಂಘನೆಯಾಗಿದೆ.
ನಾಣ್ಯಗಳ ಬಗ್ಗೆ ತಪ್ಪು ದಾರಿಗೆಖೆಯುವ ಮಾಹಿತಿಯನ್ನು ನಂಬಬಾರದು ಮತ್ತು ವದಂತಿಗಳಿಗೆ ಕಿವಿಗೊಡಬಾರದು. ಎಲ್ಲಾ ಬ್ಯಾಂಕ್‍ಗಳೂ ತಮ್ಮ ವಹಿವಾಟುಗಳಲ್ಲಿ ನಾಣ್ಯಗಳನ್ನು ಸ್ವೀಕರಿಸಲು ಹಾಗೂ ತಮ್ಮ ಎಲ್ಲಾ ಶಾಖೆಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.
ಪ್ರಸ್ತುತ ಚಲಾವಣೆಯಲ್ಲಿರುವ ಎಲ್ಲಾ ನಾಣ್ಯಗಳ ಮಾಹಿತಿಗಾಗಿ www.rbi.org.in/coins ಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
-------
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಿ: ಡಾ.ತ್ರಿಲೋಕ ಚಂದ್ರ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಐದು ತಾಲೂಕಿನಲ್ಲಿ ಕ್ಷೇತ್ರ ಭೇಟಿ ನಡೆಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತರು, ಬಳ್ಳಾರಿ ಜಿಪಂ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕ ಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ನಜೀರ್‍ಸಾಬ್ ಸಭಾಂಗಣದಲ್ಲಿ ಮಂಗಳವಾರದಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿನ ಬಿತ್ತನೆಗೆ 173897 ಹೆಕ್ಟೇರ್ ಕ್ಷೇತ್ರದ ಗುರಿ ಹೊಂದಿದ್ದು, ಅದರಲ್ಲಿ 108898 ಹೆಕ್ಟೇರ್ (ಶೇ.62.62) ಗುರಿ ಸಾಧನೆಯಾಗಿದೆ. ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ 599 ಮೀ.ಮೀ ಇದ್ದು, ಇಲ್ಲಿಯವರೆಗೆ ವಾಸ್ತವವಾಗಿ ಬಿದ್ದ ಮಳೆ 177 ಮೀ.ಮೀ ಆಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಸಭೆಗೆ ತಿಳಿಸಿದರು.
ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಪ್ರತಿ ತಾಲೂಕಿನ ಗ್ರಾಮವಾರು ಸಂಚರಿಸಬೇಕು. ಅಲ್ಲಿನ ರೈತರನ್ನು ಭೇಟಿ ಮಾಡಿ, ಬೆಳೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡಬೇಕು. ಮಳೆಯ ಕೊರತೆಯಿಂದಾಗಿ ಬೆಳೆ ಒಣಗುತ್ತಿರುವುದರ ಬಗ್ಗೆ ಸಮೀಕ್ಷೆ ಮಾಡಬೇಕು. ಅದರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಹಾಗೂ ಮುಂದಾಗುವ ಹಾನಿಗೆ ಈಗಲೇ ಬೆಳೆ ವಿಮೆ ಮಾಡಿಸುವಂತೆ ರೈತರನ್ನು ಪ್ರೇರೇಪಿಸಬೇಕು. ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು ಎಂದು ಪ್ರತಿಕ್ರಿಯಿಸಿದರು.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮಾಹಿತಿ ಪಡೆದುಕೊಂಡರಲ್ಲದೇ, ಶುದ್ಧತೆ ಕುರಿತು ಕಡ್ಡಾಯವಾಗಿ ನೀರಿನ ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಿದ್ದಲ್ಲಿ ಮಾತ್ರ ನೀರನ್ನು ಬಳಸಲು ನಿರ್ದೇಶನ ನೀಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಂಡೂರು ತಾಲೂಕಿನಲ್ಲಿ ಮಾತ್ರ ಕುಡಿಯುವ ನೀರಿನ ಅಭಾವ ಉಂಟಾಗುತ್ತದೆ. ಅದಕ್ಕಾಗಿ ಬೋರ್‍ವೆಲ್‍ಗಳ ಮೂಲಕ ಸರಬರಾಜು ಮಾಡಲಾಗುತ್ತದೆ. ಉಳಿದ ತಾಲೂಕುಗಳಲ್ಲಿ ಕಾಲುವೆಗಳಲ್ಲಿ ಈಗಾಗಲೇ ನೀರು ಹರಿಸಲಾಗಿದ್ದು, ಕೆರೆಗಳನ್ನು ಸ್ವಚ್ಛಗೊಳಿಸಿ ಕುಡಿಯುವ ನೀರು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ 1266 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ ಬಳ್ಳಾರಿ ನಗರದಲ್ಲಿ 152 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕೆಎಂಆರ್‍ಇಸಿ ಅಡಿಯಲ್ಲಿ ನಗರದಲ್ಲಿ 50 ಕಟ್ಟಡಗಳಿಗೆ ಜಾಗ ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್ ಅವರು ಸಭೆಗೆ ಮಾಹಿತಿ ನೀಡಿದರು.
ಇದಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕ ಚಂದ್ರ ಅವರು ಪ್ರತಿಕ್ರಿಯಿಸಿ, ನಗರದಲ್ಲಿನ ತೆಲುಗು ಮತ್ತು ಉರ್ದು ಶಾಲೆಗಳು ಒಳಗೊಂಡಂತೆ ಕಡಿಮೆ ವಿಧ್ಯಾರ್ಥಿಗಳ ಸಾಮಥ್ರ್ಯ ಹೊಂದಿರುವ 130 ಕಟ್ಟಡಗಳಲ್ಲಿ ಒಂದು ಕೊಠಡಿ ಕಾಯ್ದಿರಿಸಿ ಅದರಲ್ಲಿ ಕಾರ್ಯನಿರ್ವಹಿಸಲು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಎಂದು ಹೇಳಿದರು.
ಜಿಲ್ಲೆಯು ಎಸ್‍ಎಸ್‍ಎಲ್‍ಸಿ ವಾರ್ಷಿಕ ಫಲಿತಾಂಶದಲ್ಲಿ ಹಿಂದುಳಿದಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕಿದೆ. ಇದಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಭವಿತ ಶಿಕ್ಷಕರನ್ನು ಗುರುತಿಸಿ, ಅವರ ಜೊತೆ ಸಭೆ ನಡೆಸಿ, ಫಲಿತಾಂಶದಲ್ಲಿ ಜಿಲ್ಲೆಯನ್ನು ಮುನ್ನೆಲೆಗೆ ತರಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯ ಹಾಸ್ಟೆಲ್‍ಗಳಿಗೆ ಆಯಾ ಅಧಿಕಾರಿಗಳು ವಾರದಲ್ಲಿ ಭೇಟಿ ನೀಡಿ ಅಲ್ಲಿನ ಗುಣಮಟ್ಟ ಆಹಾರ, ಕಟ್ಟಡ, ಶೌಚಾಲಯ ಹಾಗೂ ಇತರೆ ಸಮಸ್ಯೆಗಳನ್ನು ವರದಿ ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರಿಗೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಖನಿಜ ಪ್ರತಿಷ್ಟಾನ(ಡಿಎಂಎಫ್)ದಿಂದ ಜಿಲ್ಲೆಯಲ್ಲಿ ಅನುಮೋದನೆಗೊಂಡ 6 ಕ್ರಿಯಾಯೋಜನೆಯಲ್ಲಿ ಇಲ್ಲಿಯವರೆಗೆ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನರೇಗಾ ಯೋಜನೆ, ಎನ್‍ಆರ್‍ಎಲ್‍ಎಂ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ವರದಿಯ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
--------
ಸೋಮವಾರ, ಆಗಸ್ಟ್ 28, 2023
ಅಪರಿಚಿತ ಮೃತ ಯುವತಿ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಕುಡುತಿನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪಟ್ಟಣಸೆರಗು ಡಿಪಿ ಸಂಖ್ಯೆ 07 ರಿಂದ ಬೇರ್ಪಡುವ ಡಿಪಿ 3ಆರ್ ಶೆಟ್ಟರ್ ಉಪಕಾಲುವೆಯಲ್ಲಿ ಸುಮಾರು 18 ರಿಂದ 20 ವರ್ಷದ ಅಪರಿಚಿತ ಮೃತ ಯುವತಿಯ ಆ.27ರಂದು ಶವ ಪತ್ತೆಯಾಗಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ.
ಚಹರೆ ಗುರುತು: ಎತ್ತರ ಸುಮಾರು 4.2 ಅಡಿ, ಸಾಧಾರಣ ಕಪ್ಪು ಮೈಕಟ್ಟು, ಕಪ್ಪು ಕೂದಲು, ತೆಳುವಾದ ಮೈಕಟ್ಟು, ಕೋಲು ಮುಖ, ಕುತ್ತಿಗೆಯ ಕೆಳಗಡೆ ಕಪ್ಪು ಮಚ್ಚೆ ಹೊಂದಿರುತ್ತಾಳೆ. ಪಾಚಿ ಬಣ್ಣದ ಟಾಪ್ ಮತ್ತು ಗೋಲ್ಡ್ ಬಣ್ಣದ ಲೇಗ್ಗಿನ್ ಧರಿಸಿರುತ್ತಾಳೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ. 08392-258100 ಗೆ ಸಂಪರ್ಕಿಸಬಹುದು ಎಂದು ಕುಡತಿನಿ ಪೆÇಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅಲ್ಪಸಂಖ್ಯಾತರ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದೆ.
ಶಿಷ್ಯವೇತನ ಪಡೆಯಲು ಇಚ್ಛಿಸುವಂತದ ಕಾನೂನು ಪದವಿಧರರು ಭರ್ತಿ ಮಾಡಿದ ಅರ್ಜಿಗಳನ್ನು ಸೆ.15 ರೊಳಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಅರ್ಹತೆಗಳು: ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ, ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು ಹಾಗೂ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-200215/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸೆ.17 ರಂದು
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಸೆ.17 ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆ.02ರಂದು ಆರಂಭ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಸೆ.09, ನಾಮಪತ್ರ ಪರಿಶೀಲನೆ ದಿನ ಸೆ.10 ರಂದು ಹಾಗೂ ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನ ಸೆ.11ರಂದು ಆಗಿರುತ್ತದೆ. ಚುನಾವಣೆಯು ಅವಶ್ಯವಾದಲ್ಲಿ ಸೆ.17 ರಂದು ಸಂಘದ ಕಚೇರಿಯಲ್ಲಿ ಜರುಗಲಿದೆ.
ಹೆಚ್ಚಿನ ಮಾಹಿತಿಗಾಗಿ ರಿಟರ್ನಿಂಗ್ ಅಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಜೆ.ನಾಗರಾಜ ಅವರ ಮೊ.8073013396 ಗೆ ಸಂಪರ್ಕಿಸಿಬಹುದು ಎಂದು ಜಿಪಂನ ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ* *ಕಾಲೇಜು ವಾರ್ಷಿಕೋತ್ಸವ ಸಮಾರಂಭ ಆ.30ರಂದು
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಕಾಲೇಜು ಶಿಕ್ಷಣ ಇಲಾಖೆ ಇವರ ಆಶ್ರಯದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ವಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ(ಸ್ವಾಯತ್ತ) 2022-23 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಆ.30ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಬಳ್ಳಾರಿ ನಗರ ಶಾಸಕರು ಹಾಗೂ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ನಾರಾ ಭರತ್ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹೊಸಪೇಟೆಯ ವಿಜಯನಗರ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ಎಚ್.ಎಂ.ಚಂದ್ರಶೇಖರ ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಮಹಾದಾನಿ ಮನೀಶ್ ಮಿತ್ತಲ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಾಯಿಪವನ್, ವಿಶ್ವನಾಥ ನಾಯಕ್, ಜಯರಾಮ (ವಕೀಲರು), ರೇಷ್ಮಾ, ರಾಮು, ಸಲ್ಮಾ ಎಸ್.ಕೆ., ಡಾ.ಆರ್.ಮರೇಗೌಡ, ಎಸ್.ಎಸ್.ಪಾಟೀಲ್, ಡಾ.ಎಸ್.ವಿ.ಜೈನ್, ಪತ್ರಾಂಕಿತ ವ್ಯವಸ್ಥಾಪಕ ಎ.ಮೌನೇಶ, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ಹೆಗಡೆ ಸೇರಿದಂತೆ ಇತರರು ಭಾಗವಹಿಸುವರು.
ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ರೆಡ್ಡಿ ಹೆಚ್.ಕೆ ಅಧ್ಯಕ್ಷತೆ ವಹಿಸುವರು.
ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿರಲಿದ್ದಾರೆ.
------
ಬಳ್ಳಾರಿ; ಕರ್ನಾಟಕ ಶಿಕ್ಷಕರ ಅರ್ಹತಾ (ಕೆಎಆರ್‍ಟಿಇಟಿ ಪರೀಕ್ಷೆ 2023) ಪರೀಕ್ಷೆ ಸೆ.03ರಂದು
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಸೆ.03 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12.00 ಗಂಟೆಯವರೆಗೆ 15 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಹ್ನ 2.00 ರಿಂದ 4.30 ರವರೆಗೆ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎ.ಹನುಮಕ್ಕ ಅವರು ತಿಳಿಸಿದ್ದಾರೆ.
ನಗರದಲ್ಲಿರುವ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ಅಧಿವೇಶನದಲ್ಲಿ 4038 ಮತ್ತು ಎರಡನೇ ಅಧಿವೇಶನದಲ್ಲಿ 5317 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು schooleducation.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವುದರ ಮೂಲಕ ಪ್ರವೇಶ ಪತ್ರಗಳ ಡೌನ್‍ಲೋಡ್ ಮಾಡಿಕೊಳ್ಳಬಹುದು.
*ಸೂಚನೆಗಳು:*
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ. 20 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚ್‍ಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ.
ಪೂರ್ವ ಮುದ್ರಿತ ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು , ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ. ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‍ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್‍ಗಳು, ಲಾಗ್ ಟೇಬಲ್‍ಗಳು, ವೈಟ್‍ಫ್ಲೂಯಿಡ್‍ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.
ವಿಕಲಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶ ನೀಡಿದೆ. ಆನ್‍ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು(01) ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರವನ್ನು ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಪಿಒಪಿ, ರಾಸಾಯನಿಕ ಲೇಪಿತ ಗಣೇಶ ವಿಗ್ರಹಗಳ ನಿಷೇಧ ಹಾಗೂ ಕೆರೆ, ಇತರ ಜಲ ಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆ ಅಪರಾಧ; ನಿಯಮ ಉಲ್ಲಂಘಿಸುವವರ ವಿರುದ್ಧ ಜಲ ಮಾಲಿನ್ಯ ಕಾಯ್ದೆ ಅನುಸಾರ ಕ್ರಮ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ಮಂಡಳಿಯು ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮಾಡಿರುವ ಹಾಗೂ ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುತ್ತದೆ. ಮಂಡಳಿಯು ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲಂಘನೆ ಮಾಡುವವರಿಗೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮಾಡಿದ ಹಾಗೂ ಬಣ್ಣ ಲೇಪಿತವಾದ ಗಣೇಶ ವಿಗ್ರಹಗಳು ಮತ್ತು ಮೂರ್ತಿಗಳನ್ನು ತಯಾರಿಸುವಿಕೆ ಮತ್ತು ಮಾರಾಟ ಮಾಡುವಂತಿಲ್ಲ.
ಅನಧಿಕೃತವಾಗಿ ತಯಾರಿ, ಮಾರಾಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಂಚಾಯತಿ, ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಕೊಟ್ಟ ಮಾತಿನಂತೆ ‘ಅನ್ನ ಭಾಗ್ಯ' ಯೋಜನೆ ಜಾರಿ; ಪ್ರತಿ ಕುಟುಂಬಕ್ಕೆ 5 ಕೆಜಿ ಹೆಚ್ಚುವರಿ ಅಕ್ಕಿ ಅಕ್ಕಿ ಲಭ್ಯವಾಗುವವರೆಗೂ ಫಲಾನುಭವಿಗಳ ಖಾತೆಗೆ ಅಕ್ಕಿಯ ಮೊತ್ತ ಜಮಾ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ ‘ಅನ್ನ ಭಾಗ್ಯ' ಯೋಜನೆಯು ಬಡವರ ಪರ ಯೋಜನೆಯಾಗಿದೆ.
ಯಾರೊಬ್ಬರೂ ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಬಡ ಕುಟುಂಬಗಳೂ ನೆಮ್ಮದಿಯ ಜೀವನ ನಡೆಸಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, ಚುನಾವಣೆಗೂ ಮುನ್ನ ಜನರಿಗೆ ಕೊಟ್ಟ ಮಾತಿನಂತೆ, ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬದ ಪ್ರತಿ ಸದಸ್ಯರಿಗೂ ಪ್ರತಿ ತಿಂಗಳು ತಲಾ 05 ಕೆ.ಜಿ. ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 05 ಕೆ.ಜಿ. ಅಕ್ಕಿಯ ಬದಲಿಗೆ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳು 170 ರೂ. ಗಳಂತೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಹೆಚ್ಚುವರಿ ಅಕ್ಕಿ ಲಭ್ಯವಾಗುವವರೆಗೆ ಮಾತ್ರ ಈ ರೀತಿ ಹಣ ಜಮಾ ಮಾಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಡವರ ಪರ ತಮ್ಮ ಹಿಂದಿನ ಅವಧಿಯಲ್ಲಿನ ಯೋಜನೆಗಳನ್ನು ಮರು ಜಾರಿಗೆ ನಿರ್ಧರಿಸಿದೆ. ಇದರ ಮೊದಲ ಹಂತವಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಿದೆ. ಆ ಮೂಲಕ ನಮ್ಮ ಸರ್ಕಾರ ಬಡವರ ಪರ ಎಂಬ ಸಂದೇಶ ರವಾನಿಸಿದೆ.
ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ 5 ಕೆಜಿ ಅಕ್ಕಿ ಜೊತೆ ,ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿತ್ತು. ಕೇಂದ್ರದ 5 ಕೆಜಿ ಅಕ್ಕಿ ವಿತರಣೆ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಸದ್ಯಕ್ಕೆ ಕುಟುಂಬದ ಪ್ರತಿ ವ್ಯಕ್ತಿಗೆ 170 (ಪ್ರತಿ ಕೆ.ಜಿಗೆ 34 ರೂಪಾಯಿಗಳಂತೆ) ನೀಡಲು ತೀರ್ಮಾನಿಸಿತು ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿದ್ದು, ಅದರಂತೆಯೇ ಜುಲೈ ತಿಂಗಳಿನಿಂದಲೇ ಹಣ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.
*ಬಾಕ್ಸ್:*
*ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ ಮಾಹಿತಿ:*
ಜುಲೈ ತಿಂಗಳಲ್ಲಿ ಜಿಲ್ಲೆಯ ಒಟ್ಟು 2,43,088 ಫಲಾನುಭವಿಗಳಿಗೆ ರೂ.170 ರಂತೆ ಡಿಬಿಟಿ ಮೂಲಕ ಒಟ್ಟು 15,43,43,850 ರೂ. ಖಜಾನೆ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 19,589 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಥವಾ ಇ- ಕೆವೈಸಿ ಆಗಿರುವುದಿಲ್ಲ ಎಂದು ಆಹಾರ ಇಲಾಖೆಯು ತಿಳಿಸಿದೆ.
ಜಿಲ್ಲೆಯಲ್ಲಿ ಒಟ್ಟು 357 ನ್ಯಾಯಬೆಲೆ ಅಂಗಡಿಗಳಿದ್ದು, ಒಟ್ಟು 3,44,756 ಪಡಿತರ ಚೀಟಿಗಳಿವೆ. ಅದರಲ್ಲಿ 26,150 ಎಎವೈ ಕಾರ್ಡ್, 2,74,878 ಬಿಪಿಎಲ್ ಕಾರ್ಡ್, 43,728 ಎಪಿಎಲ್ ಕಾರ್ಡ್‍ಗಳಿವೆ.
*ಕೋಟ್:*
ನಮ್ಮದು ದೊಡ್ಡ ಕುಟುಂಬ, ಮುಖ್ಯಮಂತ್ರಿಯವರ ಅನ್ಯಭಾಗ್ಯ ಯೋಜನೆ ಜಾರಿಯಾಗಿರೋದು ಒಳ್ಳೆಯದೇ, ಅಕ್ಕಿ ಸಿಕ್ಕಿಲ್ಲವಾದ್ದರಿಂದ ಹಣ ನೀಡಲಾಗುತ್ತಿದೆ. ಸರ್ಕಾರ ನುಡಿದಂತೆ ನಡೆದಿದೆ, ಅಕ್ಕಿಯ ಬದಲಿಗೆ ಹಣ ನೀಡುತ್ತಿರುವುದರಿಂದ ನಮಗೆ ತೊಂದರೆ ಏನೂ ಆಗಿಲ್ಲ. ಹಣದ ಬದಲಾಗಿ ಅಕ್ಕಿ ನೀಡಿದರೆ ಇನ್ನೂ ಒಳ್ಳೇದು.
- ಈಶ್ವರಪ್ಪ, ಕಾರ್ಮಿಕ, ಹೊನ್ನಳ್ಳಿ ಗ್ರಾಮ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)







































