ಬುಧವಾರ, ಆಗಸ್ಟ್ 16, 2023
ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ; 03 ಬಾಲಕಾರ್ಮಿಕರ ರಕ್ಷಣೆ
ಬಳ್ಳಾರಿ,ಆ.16(ಕರ್ನಾಟಕ ವಾರ್ತೆ);
ಕಾರ್ಮಿಕ ಇಲಾಖೆಯಿಂದ ನಗರದ ರಾಘವೇಂದ್ರ ಚಿತ್ರಮಂದಿರ ಬಳಿ, ಕೆ.ಸಿ ರಸ್ತೆ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಬುಧವಾರ ಆಕಸ್ಮಿಕ ದಾಳಿ ನಡೆಸಿ 03 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್‍ಪೋರ್ಸ್ ಸಮಿತಿ ಸಭೆ ನಡೆಸಿ ನಂತರ ಅಧಿಕಾರಿಗಳೊಂದಿಗೆ ಆಕಸ್ಮಿಕ ದಾಳಿ ಮಾಡಿ 03 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲು ಕ್ರಮ ಕೈಗೊಳ್ಳಲಾಗಿದೆ.
ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕ ರವಿದಾಸ್, ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ರಾಮಕೃಷ್ಣ, ಶಿಕ್ಷಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಭೋಜರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಕ್ಕಳ ರಕ್ಷಣಾ ಘಟಕ ಹಾಗೂ ಚೈಲ್ಡ್ ಲೈನ್ ಸಿಬ್ಬಂದಿಗಳಾದ ಕಾರ್ತಿಕ್ ಮತ್ತು ರಜನಿ ಹಾಜರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ