ಗುರುವಾರ, ಆಗಸ್ಟ್ 3, 2023

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಿದ್ಧತೆ ಸಭೆ ಆ.05ರಂದು

ಬಳ್ಳಾರಿ,ಆ.03(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಆಗಸ್ಟ್ 15 ರಂದು 77 ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಆ.05 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತೆ ಸಭೆಯನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಯಾವುದೇ ಪ್ರತಿನಿಧಿಯನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ