ಬುಧವಾರ, ಆಗಸ್ಟ್ 30, 2023
ಶ್ರೀ ಕೃಷ್ಣ ಜಯಂತಿ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ ಜಿಲ್ಲಾಡಳಿತದಿಂದ ಸೆ.06ರಂದು ಶ್ರೀ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರ್
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 06 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಬುಧವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೆಪ್ಟೆಂಬರ್ 06 ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ನಗರದ ದುರ್ಗಮ್ಮ ಗುಡಿಯಿಂದ ಗಡಿಗಿ ಚೆನ್ನಪ್ಪ ವೃತ್ತಪ್ಪ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನ ಸಭಾಂಗಣದವರೆಗೆ ಮೆರೆವಣಿಗೆ ನಡೆಯಲಿದ್ದು, ಪೊಲೀಸರು ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಹೊನ್ನುರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ