ಗುರುವಾರ, ಆಗಸ್ಟ್ 3, 2023

ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ ಆ.08ರಿಂದ

ಬಳ್ಳಾರಿ,ಆ.03(ಕರ್ನಾಟಕ ವಾರ್ತೆ): ಬಳ್ಳಾರಿ ವಿಭಾಗದ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಪೆÇಲೀಸ್ ಉಪಾಧೀಕ್ಷಕರಾದ ಕೆ.ರಾಮರಾವ್ ಮತ್ತು ಪೆÇಲೀಸ್ ನಿರೀಕ್ಷಕರಾದ ಸಂಗಮೇಶ್, ಮಹಮ್ಮದ್ ರಫಿ ನೇತೃತ್ವದಲ್ಲಿ ಆಗಸ್ಟ್ ತಿಂಗಳಲ್ಲಿ ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ, ಕುರುಗೋಡು, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಆಗಸ್ಟ್ 08 ರಿಂದ 29 ರವರೆಗೆ ನಡೆಸಲಾಗುತ್ತಿದೆ. ಆಗಸ್ಟ್ 08 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮತ್ತು ಆಗಸ್ಟ್ 16 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮತ್ತು ಆಗಸ್ಟ್ 22 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪ ತಹಶೀಲ್ದಾರರ ಕಚೇರಿ ಸಭಾಂಗಣ, ಆಗಸ್ಟ್ 25 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣ ಹಾಗೂ ಆಗಸ್ಟ್ 29 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರವರೆಗೆ ಬಳ್ಳಾರಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ನಡೆಯಲಿದೆ. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ಗಳನ್ನು ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಸ್.ಎಸ್.ಕೌಲಾಪುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ