ಬುಧವಾರ, ಆಗಸ್ಟ್ 2, 2023

ಡಾಟಾ ಎಂಟ್ರಿ ಅಪರೇಟರ್ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಆ.09 ರಂದು

ಬಳ್ಳಾರಿ,ಆ.02(ಕರ್ನಾಟಕ ವಾರ್ತೆ): ಬಳ್ಳಾರಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಡಾಟಾ ಎಂಟ್ರಿ ಅಪರೇಟರ್ ತಾತ್ಕಾಲಿಕ ಹುದ್ದೆಗಳಿಗೆ ಆಗಸ್ಟ್ 09 ರಂದು ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ ಎಂದು ತಹಶೀಲ್ದಾರ ಗುರುರಾಜ ಅವರು ತಿಳಿಸಿದ್ದಾರೆ. ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಯಾವುದೇ ಪದವಿ, ಕಂಪ್ಯೂಟರ್ ಜ್ಞಾನ (ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್) ಹಾಗೂ ಕನಿಷ್ಟ 01 ವರ್ಷ ಅನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಮೂಲ ಅಂಕಪಟ್ಟಿಗಳು, ಪ್ರಮಾಣ ಪತ್ರ ಹಾಗೂ ದೃಢೀಕೃತ ನಕಲು ಪ್ರತಿಯೊಂದಿಗೆ ಹಾಜರಾಗಬೇಕು. ಆಗಸ್ಟ್ 09 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ನೂತನ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-277415 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ