ಸೋಮವಾರ, ಆಗಸ್ಟ್ 7, 2023
ಬಳ್ಳಾರಿಯ ಶ್ರೀ ಕುಮಾರಸ್ವಾಮಿ ದೇವಸ್ಥಾನದ ಆಡಿ ಕೃತಿಕ ಮಹೋತ್ಸವ ಆ.09ರಂದು
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಬಳ್ಳಾರಿ ನಗರದ ಫೈರ್ ಸ್ಟೇಷನ್ ಹತ್ತಿರದ ಶ್ರೀ ಕುಮಾರಸ್ವಾಮಿ ದೇವಸ್ಥಾನದಲ್ಲಿ “ಆಡಿ ಕೃತಿಕ ಮಹೋತ್ಸವ”ವು ಆಗಸ್ಟ್ 09 ರಂದು ಬೆಳಿಗ್ಗೆ 11 ರಿಂದ ಸಂಜೆ 05 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
ಆ.09 ರಂದು ಉದಯ 05ರಿಂದ 6.30ರವರೆಗೆ ಕೃತಕ ನಕ್ಷತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮಹಾಪಂಚಾಮೃತ ಅಭಿಷೇಕ ಪೂಜೆ ನಡೆಯಲಿದೆ ಹಾಗೂ ಸಂಜೆ 06ಕ್ಕೆ ಶ್ರೀ ಸುಬ್ರಮಣ್ಯ ಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕಾರದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11ರಿಂದ ಸಂಜೆ 05ರವರೆಗೆ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಇರುತ್ತದೆ.
ಭಕ್ತಾಧಿಗಳು ದೇವರಿಗೆ ನೀಡುವ ಕಾಣಿಕೆ, ದವಸ ಧಾನ್ಯವನ್ನು ದೇವಸ್ಥಾನದ ಕಾರ್ಯಾಲಯದಲ್ಲಿ ಸಲ್ಲಿಸಿ ಸೂಕ್ತ ರಸೀದಿಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿರುವ ಅವರು ಎಲ್ಲ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತನುಮನ, ಧನ ಸಹಾಯ ಮಾಡಿ ಶ್ರೀ ಸುಬ್ರಮಣ್ಯಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಅವರು ಕೋರಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ