ಗುರುವಾರ, ಆಗಸ್ಟ್ 17, 2023
ಡಿ.ದೇವರಾಜು ಅರಸುರವರ 108ನೇ ಜನ್ಮದಿನ ಆಚರಣೆ ಆ.20 ರಂದು
ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಸಮಾರಂಭ ಆ.20 ರಂದು ನಗರದ ಡಾ.ರಾಜ್‍ಕುಮಾರ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆ.20ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ.ರಾಜ್‍ಕುಮಾರ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್‍ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಮಹಾಪೌರರಾದ ಡಿ.ತ್ರಿವೇಣಿ ಸೇರಿದಂತೆ ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ಪ್ರದೇಶ ದೇವರಾಜು ಅರಸು ವೇದಿಕೆ ಅಧ್ಯಕ್ಷ ಕಲ್ಲುಕಂಭ ಪಂಪಾಪತಿ ಅವರು ಡಾ.ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ನೀಡುವರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜೀತ್ ಕುಮಾರ್ ಬಂಡಾರು, ಎಡಿಸಿ ಮೊಹಮ್ಮದ್ ಝುಬೇರಾ.ಎನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಆರ್.ಸುರೇಶ್‍ಬಾಬು ಸೇರಿದಂತೆ ಹಿಂದುಳಿದ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ