ಶುಕ್ರವಾರ, ಆಗಸ್ಟ್ 11, 2023
ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 119ನೇ ನೀರಾವರಿ ಸಲಹಾ ಸಮಿತಿ ಸಭೆ ಆ.16ರಂದು
ಬಳ್ಳಾರಿ,ಆ.11(ಕರ್ನಾಟಕ ವಾರ್ತೆ):
ತುಂಗಾಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 119ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆ.16ರಂದು ಬೆಳಿಗ್ಗೆ 11.30ಕ್ಕೆ ಕಾಡಾ ಟಿ.ಬಿ.ಪಿ ಮುನಿರಾಬಾದ್ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಇವರ ಘನ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಸಚಿವರು, ಸದಸ್ಯರು ಮತ್ತು ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆ ನೀಡಬೇಕು ಎಂದು ಮುನಿರಾಬಾದ್‍ನ ತುಂಗಾಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಾಭದ್ರ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ