ಗುರುವಾರ, ಆಗಸ್ಟ್ 17, 2023

119ನೇ ನೀರಾವರಿ ಸಲಹಾ ಸಮಿತಿ ಸಭೆ; ವಿವಿಧ ಕಾಲುವೆಗಳಿಗೆ ನ.30ರವರೆಗೆ ನೀರು ಹರಿಸಲು ನಿರ್ಣಯ

ಬಳ್ಳಾರಿ,ಆ.17(ಕರ್ನಾಟಕ ವಾರ್ತೆ): 2023-24ನೇ ಸಾಲಿನ 119ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ನವೆಂಬರ್ 30 ರವರೆಗೆ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ. *ನೀರನ್ನು ಒದಗಿಸುವ ಕಾಲಾವಧಿ:* ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಆ.03 ರಿಂದ ನ.30 ರವರೆಗೆ 4100 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ: ಆ.03 ರಿಂದ ನ.30 ರವರೆಗೆ 1300 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ: ಆ.03 ರಿಂದ ನ.30ರವರೆಗೆ 850 ಕ್ಯೂಸೆಕ್ಸ್‍ನಂತೆ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ರಾಯ ಬಸವಣ್ಣ ಕಾಲುವೆ: ಜೂ.01 ರಿಂದ 270 ಕ್ಯೂಸೆಕ್ಸ್‍ನಂತೆ ಹರಿಸಲಾಗುತ್ತಿದೆ. ನ.30ರವರೆಗೆ ಮುಂದುವರೆಸಲಾಗುವುದು. ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ಆ.03 ರಿಂದ ನ.30ರವರೆಗೆ 25 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ. *ರೈತ ಭಾಂದವರಲ್ಲಿ ಮನವಿ:* ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ರೈತರು ಸಹಕರಿಸಬೇಕು. ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಭಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತವಾಗಿ ವೇಳಾಪಟ್ಟಿ ಹೊರಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ