ಶುಕ್ರವಾರ, ಆಗಸ್ಟ್ 11, 2023
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಆ.13ರಂದು
ಬಳ್ಳಾರಿ,ಆ.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-46, ಎಫ್-47 ಫೀಡರ್‍ಗಳ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಆಗಸ್ಟ್ 13 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಮಿಲ್ಲರ್‍ಪೇಟೆ, ಬೊಮ್ಮನಾಳ್ ರೋಡ್, ಇಂಡಸ್ಟ್ರಿಯಲ್ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ.ಟಿ. ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ