ಮಂಗಳವಾರ, ಆಗಸ್ಟ್ 8, 2023
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ
ಬಳ್ಳಾರಿ,ಆ.08(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಾದ ಎಂ.ಹೆಚ್.ಪ್ರಕಾಶ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ