ಬುಧವಾರ, ಆಗಸ್ಟ್ 2, 2023
ಆ.14 ರಂದು ಪಿಂಚಣಿ ಅದಾಲತ್
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಆಗಸ್ಟ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ.
ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಪತ್ರ ಮೂಲಕ ಬರೆದು ಆಗಸ್ಟ್ 10 ರೊಳಗೆ ಕಳುಹಿಸಬೇಕು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-226304 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ