ಶುಕ್ರವಾರ, ಆಗಸ್ಟ್ 18, 2023

ಸಿರುಗುಪ್ಪ: ಹಚ್ಚೋಳ್ಳಿ ಶಾಖಾ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಆ.19ರಂದು

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಸಿರುಗುಪ್ಪ ಉಪವಿಭಾಗ ಹಚ್ಚೋಳ್ಳಿ ಶಾಖಾ ಕಚೇರಿಯಲ್ಲಿ ಆ.19 ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜೆಸ್ಕಾಂನ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಿದ್ದು, ಈ ಸಭೆಯಲ್ಲಿ ಕಾರ್ಯ ಮತ್ತು ಪಾಲನೆ ಉಪವಿಭಾಗ ಜೆಸ್ಕಾಂ ಸಿರುಗುಪ್ಪ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವಂತಹ ಗ್ರಾಹಕರು ಸಭೆಗೆ ಹಾಜರಾಗುವ ಮುಖಾಂತರ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸಿರುಗುಪ್ಪ ಜೆಸ್ಕಾಂನ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ