ಶುಕ್ರವಾರ, ಆಗಸ್ಟ್ 18, 2023

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆ.19ರಂದು

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗ ಕಾರ್ಯ ಮತ್ತು ಪಾಲನಾ ಶಾಖೆ-2 ರ ವ್ಯಾಪ್ತಿಗೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಕಮ್ಮರಚೇಡು ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗದ ಸಹಾಯಕ ಇಂಜಿನಿಯರ್ ಸಂತೋಷಿಭಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ