ಗುರುವಾರ, ಆಗಸ್ಟ್ 24, 2023
ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬ ಪ್ರಯುಕ್ತ ವಿಶೇಷ ಪೂಜೆ ಆ.25ರಿಂದ
ಬಳ್ಳಾರಿ,ಆ.24(ಕರ್ನಾಟಕ ವಾರ್ತೆ):
ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಆ.25 ಮತ್ತು 26 ರಂದು ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕಾಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
ಅ.25 ರಂದು ದೇವಸ್ಥಾನಕ್ಕೆ ಬರುವ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ ಮತ್ತು ಬಳೆ ವಿತರಣೆ ಮಾಡಲಾಗುವುದು. ಆ.26 ರಂದು ದೇವಿಗೆ ಬಂಗಾರದ ಆಭರಣಗಳಿಂದ ಅಲಂಕಾರ ಮಾಡಲಾಗುತ್ತದೆ.
ಸದರಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಪ್ರಧಾನ ಧರ್ಮಕರ್ತ ಪಿ.ಎಂ.ರಾಜಶೇಖರ ಅವರು ತಿಳಿಸಿದ್ದಾರೆÀ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ