ಶುಕ್ರವಾರ, ಆಗಸ್ಟ್ 25, 2023
ನೇರ ಸಂದರ್ಶನ ಆ.29ರಂದು
ಬಳ್ಳಾರಿ,ಆ.25(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನದಲ್ಲಿ ಪೇಟಿಎಂ ಮತ್ತು ಎಲ್‍ಐಸಿ ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
*ವಿದ್ಯಾರ್ಹತೆ:* ಎಸ್.ಎಸ್.ಎಲ್.ಸಿ, ಪಿಯುಸಿ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ