ಸೋಮವಾರ, ಆಗಸ್ಟ್ 28, 2023

ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ* *ಕಾಲೇಜು ವಾರ್ಷಿಕೋತ್ಸವ ಸಮಾರಂಭ ಆ.30ರಂದು

ಬಳ್ಳಾರಿ,ಆ.28(ಕರ್ನಾಟಕ ವಾರ್ತೆ): ಕಾಲೇಜು ಶಿಕ್ಷಣ ಇಲಾಖೆ ಇವರ ಆಶ್ರಯದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ವಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ(ಸ್ವಾಯತ್ತ) 2022-23 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಆ.30ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಬಳ್ಳಾರಿ ನಗರ ಶಾಸಕರು ಹಾಗೂ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ನಾರಾ ಭರತ್ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹೊಸಪೇಟೆಯ ವಿಜಯನಗರ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ಎಚ್.ಎಂ.ಚಂದ್ರಶೇಖರ ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಮಹಾದಾನಿ ಮನೀಶ್ ಮಿತ್ತಲ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಾಯಿಪವನ್, ವಿಶ್ವನಾಥ ನಾಯಕ್, ಜಯರಾಮ (ವಕೀಲರು), ರೇಷ್ಮಾ, ರಾಮು, ಸಲ್ಮಾ ಎಸ್.ಕೆ., ಡಾ.ಆರ್.ಮರೇಗೌಡ, ಎಸ್.ಎಸ್.ಪಾಟೀಲ್, ಡಾ.ಎಸ್.ವಿ.ಜೈನ್, ಪತ್ರಾಂಕಿತ ವ್ಯವಸ್ಥಾಪಕ ಎ.ಮೌನೇಶ, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ಹೆಗಡೆ ಸೇರಿದಂತೆ ಇತರರು ಭಾಗವಹಿಸುವರು. ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ರೆಡ್ಡಿ ಹೆಚ್.ಕೆ ಅಧ್ಯಕ್ಷತೆ ವಹಿಸುವರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿರಲಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ