ಮಂಗಳವಾರ, ಆಗಸ್ಟ್ 29, 2023
ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮ ಆ.30ರಂದು
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶ ಇವರ ಸಂಯುಕ್ತಾಶ್ರಯದಲ್ಲಿ ಆ.30 ರಂದು ಬೆಳಿಗ್ಗೆ 11.30 ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ (ಮಾ.ಪು) ಹೈಸ್ಕೂಲ್ ಮೈದಾನದಲ್ಲಿ ‘ನಾನೇ ಯಜಮಾನಿ... ನಾನೇ ಗೃಹಲಕ್ಷ್ಮಿ’ ಎಂಬ ಆಶಯದೊಂದಿಗೆ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮ ನಡೆಯಲಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸಮಾರಂಭವನ್ನು ಉದ್ಘಾಟಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ