ಶುಕ್ರವಾರ, ಆಗಸ್ಟ್ 4, 2023
508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಆ.06 ರಂದು
ಬಳ್ಳಾರಿ,ಆ.04(ಕರ್ನಾಟಕ ವಾರ್ತೆ):
ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದಿ ಅವರಿಂದ ರೈಲ್ವೆ ಸಚಿವಾಲಯದ 508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಗಸ್ಟ್ 06 ರಂದು ಬೆಳಗ್ಗೆ 9.15 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು, ಅಂದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕೇಂದ್ರ ರೈಲ್ವೆ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್, ಕೇಂದ್ರ ರೈಲ್ವೆ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರಾದ ರಾವ್ ಸಾಹೇಬ್ ಪಾಟೀಲ್ ದಾನ್ವೆ, ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ಸಚಿವೆ ದರ್ಶನಾ ಜರ್ದೋಶ್ ಅವರು ಘನ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ