ಸೋಮವಾರ, ಆಗಸ್ಟ್ 14, 2023
ಬಳ್ಳಾರಿಯಲ್ಲಿ 77 ನೇ ಸ್ವಾತಂತ್ರೋತ್ಸವ ದಿನಾಚರಣೆ
ಬಳ್ಳಾರಿ,ಆ.13(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ 77 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆ.15 ರಂದು ಬೆಳಿಗ್ಗೆ 09 ಕ್ಕೆ ನಗರದ ವಿಮ್ಸ್ ಮೈದಾನದಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಧ್ವಜಾರೋಹಣಾ ನೆರವೇರಿಸಿ ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ.
ಇದಕ್ಕೂ ಮುಂಚೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಬೆಳಿಗ್ಗೆ 08 ಕ್ಕೆ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಎಂ.ರಾಜೇಶ್ವರಿ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ರಿಂದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಉಪಸ್ಥಿತರಿರಲಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ