ಬುಧವಾರ, ಆಗಸ್ಟ್ 16, 2023
ಕೇಂದ್ರ ಸರ್ಕಾರದ ಸಂವಹನ ಇಲಾಖೆಯಿಂದ ಸಿರಿವಾರ ಗ್ರಾಮದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಬಳ್ಳಾರಿ,ಆ.16(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದ ಸಂವಹನ ಇಲಾಖೆ, ಸಿರಿವಾರ ಗ್ರಾಮ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದೊಡ್ಡಬಸಪ್ಪ ಅವರು ಧ್ವಜಾರೋಹಣಾ ನೇರವೇರಿಸಿದರು.
ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಹೈದರಾಬಾದ್ ದೂರದರ್ಶನ ಕೇಂದ್ರದ ನಿವೃತ್ತ ಉಪ ನಿರ್ದೇಶಕ ಡಾ.ಕೆ.ಸುಧಾಕರ್‍ರಾವ್ ಅವರು ಮಾತನಾಡಿ, ಮಕ್ಕಳಲ್ಲಿ ದೇಶಭಕ್ತಿ ಮತ್ತು ದೇಶಭಾವನೆ ಬೆಳೆಸಿದರೆ ಮುಂದೆ ಅವರು ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಇದೇ ಸಂದರ್ಭದಲ್ಲಿ ಅಮೃತ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕೇಂದ್ರ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕೇಂದ್ರ ಸಂವಹನ ಇಲಾಖೆಯ ಪರವಾಗಿ ಬಹುಮಾನಗಳು ಅತಿಥಿಗಳ ಮೂಲಕ ವಿತರಿಸಲಾಯಿತು. ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.
ಶಾಲೆಯ ಮುಖ್ಯ ಗುರುಗಳಾದ ಭಾಗ್ಯಲಕ್ಷ್ಮಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಪಡೆದು ವಿದ್ಯಾರ್ಥಿಗಳು ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಹಾತ್ಮಗಾಂಧಿ, ಸರ್ದಾರ್ ವಲ್ಲಭಬಾಯಿ ಪಾಟೇಲ್, ಝಾನ್ಸಿರಾಣಿ ಲಕ್ಷ್ಮಿಬಾಯಿ ಮುಂತಾದ ಮಹನೀಯರ ತ್ಯಾಗವನ್ನು ನಾವು ಎಂದಿಗೂ ಮರೆಯಲಾಗದೆಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಛಾಯಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಪಿ.ಸುಧಾಕರ್, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಲಿಂಗಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಪಾರ್ವತಮ್ಮ, ಮಲ್ಲಮ್ಮ, ಯಲ್ಲಮ್ಮ, ಎಸ್‍ಡಿಎಂಸಿ ಸದಸ್ಯರಾದ ಗಾದಿಲಿಂಗಪ್ಪ, ದ್ರಾಕ್ಷಾಯಿಣಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳು ಮುತ್ತತರು ಗಣ್ಯರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ