ಮಂಗಳವಾರ, ಆಗಸ್ಟ್ 15, 2023

ನೂತನ ಜಿಲ್ಲಾಡಳಿತ ಭವನದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ

ಬಳ್ಳಾರಿ,ಆ.15(ಕರ್ನಾಟಕ ವಾರ್ತೆ): ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು 77ನೇ ಸ್ವಾತಂತ್ರ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ಯ ದಿನಾಚರಣೆಯ ಶುಭಾಷಯ ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಹೇಮಂತ್‍ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ